ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಡಾ ಹಗರಣ: ಟಿಜೆ ಅಬ್ರಹಾಂ ದೂರು; ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ!

Twitter
Facebook
LinkedIn
WhatsApp
ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ

ಮುಡಾ ಹಗರಣ: ಟಿಜೆ ಅಬ್ರಹಾಂ ದೂರು; ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ! ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಹಗರಣ ಹೇಗೆ ನಡೆದಿದೆ ಎಂದು ವಿವರಿಸಿದ್ದಾರೆ.

ಇಲ್ಲದೇ ಇರುವ ಕೃಷಿ ಭೂಮಿಯನ್ನು ಖರೀದಿ ಮಾಡಿ ಅದನ್ನು ಭೂ ಪರಿವರ್ತನೆ ಮಾಡಿದ್ದಾರೆ. ಅಲ್ಲದೆ ದಾನಪತ್ರವನ್ನೂ ತಯಾರಿಸಿದ್ದಾರೆ. ಈ ಜಮೀನಿಗೆ ಪರ್ಯಾಯ ನಿವೇಶನವನ್ನೂ ಪಡೆದಿದ್ದಾರೆ ಎಂದು ಟಿಜೆ ಅಬ್ರಹಾಂ ಅವರು ಆರೋಪಿಸಿದ್ದಾರೆ. ಸಿದ್ದರಾಮಯ್ಯನವರ ಭಾವಮೈದ ಮಲ್ಲಿಕಾರ್ಜುನ ಅವರಿಗೆ ಮಾರಾಟವಾಗಿದ್ದು ಕೃಷಿ ಭೂಮಿ ಹೇಗಾಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಮುಡಾ ಹಗರಣದ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ನೀಡಿದ ದೂರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಇಡೀ ಕಾಂಗ್ರೆಸ್​​ ಸರ್ಕಾರದ ಬುಡ ಅಲುಗಾಡುವಂತೆ ಮಾಡಿದೆ.

ಸಿಕ್ಯೂಷನ್​ಗೆ ಅನುಮತಿ ನೀಡಿ ಎಂದು ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಟಿಜೆ ಅಬ್ರಹಾಂ ನೀಡಿರುವ ದೂರೇ ಇದೀಗ ಸಿದ್ದರಾಮಯ್ಯಗೆ ಮಾತ್ರವಲ್ಲ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. 

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಟಿಜೆ ಅಬ್ರಾಹಂ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂಗೆ ಏಳು ದಿನಗಳಲ್ಲಿ ಉತ್ತರಿಸುವಂತೆ ಶೋಕಸ್ ನೋಟಿಸ್ ನೀಡಿದ್ದದಾರೆ. 

ಇದರಿಂದ ಅಬ್ರಾಹಂ ವಿರುದ್ಧ ಕೋಪಗೊಂಡಿರುವ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದರಿಂದ ಕೋಪಗೊಂಡಿರುವ ಟಿಜೆ ಅಬ್ರಹಾಂ, ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಲೀಗಲ್ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಟಿಜೆ ಅಬ್ರಾಹಂ, ಬ್ಲಾಕ್ ಮೈಲರ್ ಎನ್ನುವುದನ್ನು ಬಹಿರಂಗವಾಗಿ ನಿಮ್ಮ ಹೇಳಿಕೆ ವಾಪಸ್ ಪಡೆಯಿರಿ. ಇಲ್ಲದಿದ್ದರೆ ನಿಮ್ಮ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯ ಕಾರ್ಯದರ್ಶಿ ಭೇಟಿಗೆ ಆಗಮಿಸಿದ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಮುಡಾ ಹಗರಣದಲ್ಲಿ ಹೇಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ವಿವರಿಸಿದರು. 

2004ರಲ್ಲಿ 3.16 ಎಕರೆ ಜಮೀನು ಮಾರಾಟ ಆಗುತ್ತೆ. ಸಿದ್ದರಾಮಯ್ಯರ ಭಾವಮೈದ ಮಲ್ಲಿಕಾರ್ಜುನರಿಗೆ ಮಾರಾಟ ಆಗುತ್ತೆ. ಕೆಸರೆ ಗ್ರಾಮದ 464 ಸರ್ವೆ ನಂ.ನಲ್ಲಿ 3.16 ಎಕರೆ ಜಮೀನನ್ನು ದೇವರಾಜು ಎಂಬವರು ಮಾರಾಟ ಮಾಡುತ್ತಾರೆ. ಕೆಸರೆ ಗ್ರಾಮದ ಇದೇ ಸರ್ವೆ ನಂ.ನಲ್ಲಿ ದೇವನೂರು ಬಡಾವಣೆ 2001 ರಲ್ಲಿ ನಿರ್ಮಾಣ ಆಗಿರುತ್ತದೆ. ನಿವೇಶನ, ರಸ್ತೆ, ಪಾರ್ಕ್ ಗಳನ್ನು ಮಾಡಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಇದು ಕೃಷಿ ಭೂಮಿ ಹೇಗೆ ಆಗುತ್ತೆ? ಕ್ರಯಪತ್ರ ಆಗುವ ಮೊದಲೇ ನಿವೇಶನ ಮಾಡಿ ಹಂಚಿಕೆ ಮಾಡಲಾಗಿರುತ್ತದೆ. ಯಾರಿಗೋ ಹಂಚಿಕೆಯಾದ ಜಮೀನನ್ನು ಕೃಷಿ ಭೂಮಿ ಎಂದು ಮಾರಾಟ ಮಾಡಲು ಸಾಧ್ಯವೇ? ಯಾರಿಗೋ ಹಂಚಿಕೆಯಾದ ಜಮೀನನ್ನು ಇದು ನಮ್ಮ ಜಮೀನು ಎಂದು ಹೇಳಬಹುದಾ?ಕ್ರಯಪತ್ರದಲ್ಲಿ ಈ ಭೂಮಿಗೆ ಕಂದಾಯ ಕಟ್ಡಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಹಾಗಾದರೆ ಯಾವ ಜಮೀನಿಗೆ ಕಂದಾಯ ಕಟ್ಟುತ್ತಿದ್ದಾರೆ. ಸೈಟ್ ಮಾರಾಟ ಆದವರ ಹೆಸರಲ್ಲಿ ಕಂದಾಯ ಕಟ್ಟುತ್ತಿದ್ದಾರಾ ಎಂದು ಪ್ರಶ್ನಿಸಿದರು.

ಮುಡಾದವರು ಹಂಚಿದ ನಿವೇಶನ ಇವರು ಸ್ವಾಧೀನದಲ್ಲಿದ್ದಾರಾ? ಯಾವ ಜಮೀನನ್ನು ಪರಿವರ್ತನೆ ಮಾಡಿರುವುದು? ಈಗಾಗಲೇ ನಿವೇಶನ, ರಸ್ತೆ, ಪಾರ್ಕ್ ಮಾಡಿ ಅಭಿವೃದ್ಧಿ ಯಾಗಿರುವ ಸೈಟನ್ನು ಇವರು ಭೂ ಪರಿವರ್ತನೆ ಮಾಡುತ್ತಿದ್ದಾರಾ? ಹಾಗಾದರೆ ಅವರಿಗೆ ಇದರಲ್ಲಿ ತಪ್ಪೇ ಕಾಣಿಸುತ್ತಿಲ್ಲವೇ? ಮುಡಾ ನಿಮ್ಮ ಜಮೀನನ್ನು ಸ್ವಾಧೀನ ಪಡಿಸಿದೆಯಾ? 2004ರಲ್ಲಿ ನೀವು ಖರೀದಿ ಮಾಡಿದಾಗ ಅದು ಕೃಷಿ ಭೂಮಿ ಎಲ್ಲಾಗಿತ್ತು. ನೀವು ಖರೀದಿ ಮಾಡಿದ ಭೂಮಿ ಎಲ್ಲಿದೆ ಎಂಬುದನ್ನು ತೋರಿಸಿ ಎಂದು ಸವಾಲು ಹಾಕಿದರು.

ವಿಜಯೇಂದ್ರಗೆ DKS ಸವಾಲು:

“ಭ್ರಷ್ಟಾಚಾರಿಗಳಿಂದ ಭ್ರಷ್ಟಾಚಾರಿಗಳಿಗೋಸ್ಕರ ಭ್ರಷ್ಟಾಚಾರಿಗಳೇ ಪಾದಯಾತ್ರೆ ನಡೆಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಡದಿಯಲ್ಲಿ ಶುಕ್ರವಾರ ಆರಂಭವಾದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist