ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸರ್ಕಾರಿ ಕಾಲೇಜು ತೆರೆದರೆ ಉಗ್ರ ಹೋರಾಟ: ಮುತಾಲಿಕ್ ಕಿಡಿ

Twitter
Facebook
LinkedIn
WhatsApp
ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸರ್ಕಾರಿ ಕಾಲೇಜು ತೆರೆದರೆ ಉಗ್ರ ಹೋರಾಟ: ಮುತಾಲಿಕ್ ಕಿಡಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದ್ಧು ಇದು ಸರಿಯಲ್ಲ.

ಸರ್ಕಾರದ ಈ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಶ್ರೀರಾಮ ಸೇನೆ ಸೇರಿದಂತೆ ಯಾವುದೇ ಹಿಂದು ಪರ ಸಂಘಟನೆಗಳ ಮುಖಂಡರು ಇದಕ್ಕೆ ಒಪ್ಪಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಶ್ರೀ ರಾಮಸೇನೆ ಮುಂದಾಳತ್ವದಲ್ಲಿ ಎಲ್ಲ ಹಿಂದು ಸಂಘಟನೆಗಳ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದ ಅವರು, ಕಾಂಗ್ರೆಸ್ ನವರು ಈ ರೀತಿಯಾದ ತುಷ್ಟೀಕರಣದಿಂದ ಇಂದು ಈ ಪರಿಸ್ಥಿತಿಗೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ