ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

Twitter
Facebook
LinkedIn
WhatsApp
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. 

ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ  ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.

ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

ಹಾವೇರಿ ಶಾಸಕ ನೆಹರು ಓಲೇಕಾರ್‌ಗೆ 2 ವರ್ಷ ಜೈಲು ಶಿಕ್ಷೆ: ಮಕ್ಕಳಿಬ್ಬರೂ ಜೈಲು ಪಾಲು:

ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲು‌ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಬೆಂಗಳೂರು (ಫೆ.13): ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲು‌ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಇನ್ನು ಶಾಸಕ ನೆಹರು ಓಲೆಕಾರ್ ಅವರೊಂದಿಗೆ ಅವರ ಇಬ್ಬರು ಮಕ್ಕಳಿಗೂ 2ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರು ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ನಿಂದ‌ ಆದೇಶ ಹೊರಡಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕಟ ಮಾಡಲಾಗಿದೆ. 2 ವರ್ಷ ಜೈಲು ಜೊತೆಗೆ 2ಸಾವಿರ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ