ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ: ಹೆಣ್ಣಿನ ಸ್ವರದಲ್ಲಿ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ವ್ಯಕ್ತಿಯ ಬಂಧನ

Twitter
Facebook
LinkedIn
WhatsApp
Blackmail Phone Call

ಮೂಡುಬಿದಿರೆ, ಫೆ 25 : ಮಹಿಳೆಯ ದ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲೆ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ಧನಂಜಯ ಎಂದು ಗುರುತಿಸಲಾಗಿದೆ.

ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿ ಹೊಸಬೆಟ್ಟು ನಿವಾಸಿಯೋರ್ವರಿಗೆ ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ, ಯಾವುದೋ ಹುಡುಗಿಯ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪ ಈತನ ಮೇಲಿದೆ

ಆರೋಪಿ ಬಿರಾವು ಧನಂಜಯವು, ಹೊಸಬೆಟ್ಟು ನಿವಾಸಿಗೆ ಕರೆ ಮಾಡಿ 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ. ಕಂಗಾಲಾಗಿ ಸಂತ್ರಸ್ತರು ಒಮ್ಮೆ 2 ಸಾವಿರ ಗೂಗಲ್‌ ಪೇ ಮಾಡಿದ್ದರು. ಬಳಿಕವೂ ಪದೇಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಕೊನೆಗೆ ಸುರತ್ಕಲ್‌ ಠಾಣೆಗೆ ದೂರು ನೀಡಿದರು. ಸುರತ್ಕಲ್‌ ಪೊಲೀಸರು ಉಷಾ ಹೆಸರಿನ ಧನಂಜಯನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ