ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂರು ಲಕ್ಷ ರುಪಾಯಿವರೆಗೆ ರೈತರ ಸಾಲ ಮನ್ನಾ ಗುಜರಾತಿನಲ್ಲಿ ರಾಹುಲ್ ಗಾಂಧಿ ಘೋಷಣೆ

Twitter
Facebook
LinkedIn
WhatsApp
ಮೂರು ಲಕ್ಷ ರುಪಾಯಿವರೆಗೆ ರೈತರ ಸಾಲ ಮನ್ನಾ ಗುಜರಾತಿನಲ್ಲಿ ರಾಹುಲ್ ಗಾಂಧಿ ಘೋಷಣೆ

ಅಹಮದಾಬಾದ್: ‘ಮುಂಬರುವ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ₹3ಲಕ್ಷದವರೆಗಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಘೋಷಿಸಿದ್ದಾರೆ. ಅಹಮದಾಬಾದ್‌ನಲ್ಲಿ ಸೋಮವಾರ ಆಯೋಜಿಸಿದ್ದ ಗುಜರಾತ್ ಚುನಾವಣೆಯ ಸಂಕಲ್ಪ ಸಮಾವೇಶದ ಪ್ರಯುಕ್ತ ಅವರು ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಈ ಮಾತು ಹೇಳಿದರು.

ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗುಜರಾತ್ ಜನಕ್ಕೆ ಗರಿಷ್ಠ ₹500ಗೆ ಒಂದು ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಎಷ್ಟೇ ತೊಂದರೆ ಕೊಟ್ಟರೂ ನಾವು ಒಗ್ಗಟ್ಟಾಗಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹಲೋತ್ ಸೇರಿದಂತೆ ಗುಜರಾತ್ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ. ಇನ್ನು ಇದಕ್ಕೂ ಮುನ್ನ ನವದೆಹಲಿಯಲ್ಲಿ ಆಯೋಜಿಸಿದ್ದ ಬೆಲೆ ಏರಿಕೆ ವಿರುದ್ಧ ದನಿ ಏರಿಕೆ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಮತ್ತು ಕ್ರೋಧ ಹೆಚ್ಚಾಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರು ಉದ್ದೇಶಪೂರ್ವಕವಾಗಿ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ