ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಮೂವರು ಸಾವು!

Twitter
Facebook
LinkedIn
WhatsApp
ambulance Accident In Chitradurga 4

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ambulance Accident In Chitradurga

ಒಡಿಶಾದಲ್ಲಿ ಮತ್ತೊಂದು ಅಪಘಾತ: ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವು, 3 ಮಂದಿಗೆ ಗಂಭೀರ ಗಾಯ!

ಜಾಜ್ ಪುರ:  ಒಡಿಶಾದ ಬಾಲಾಸೋರ್ ನಲ್ಲಿ 288 ಪ್ರಯಾಣಿಕರನ್ನು ಬಲಿ ಪಡೆದ ತ್ರಿವಳಿ ರೈಲು ದುರಂತ ಪ್ರಕರಣ ಸಂಭವಿಸಿ ಇನ್ನೂ ಒಂದು ವಾರ ಕಳೆದಿಲ್ಲ ಆದಾಗಲೇ ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ.

ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾಜ್‌ಪುರ ರಸ್ತೆ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೂಡ್ಸ್ ರೈಲು ಚಲಿಸಲು ಪ್ರಾರಂಭಿಸಿದಾಗ ಕಾರ್ಮಿಕರು ಅದರಡಿ ಭಾರೀ ಮಳೆಯಿಂದ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ದಿಢೀರನೆ ಗುಡುಗು ಸಹಿತ ಮಳೆಯಾಗಿದ್ದು, ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾಗ ರೈಲು ಚಲಿಸಲು ಪ್ರಾರಂಭಿಸಿದೆ. ಇದರಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ವಕ್ತಾರರು ಹೇಳಿದ್ದಾರೆ.

ಅಲ್ಲದೇ, ಇನ್ನಿಬ್ಬರು ಸಹ ಗಾಯಗೊಂಡಿದ್ದಾರೆ ಎಂದು ಜಾಜ್‌ಪುರದ ಸ್ಥಳೀಯರು ಹೇಳಿದ್ದಾರೆ. ಬಾಲಾಸೋರ್ ಜಿಲ್ಲೆಯಲ್ಲಿ 288 ಜನರ ಸಾವಿಗೆ ಕಾರಣವಾದ ಮೂರು ರೈಲುಗಳನ್ನು ಒಳಗೊಂಡ ದೊಡ್ಡ ಅಪಘಾತದ ಐದು ದಿನಗಳ ನಂತರ ಈ ಘಟನೆ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ