ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ, ಬೆದರಿಕೆ

Twitter
Facebook
LinkedIn
WhatsApp
280637090 582851293197381 1961893367857767489 n 2

ಬ್ಯೂನಸ್ ಐರಿಸ್: ಫಿಫಾ ವಿಶ್ವಕಪ್ (FIFA WorldCup) ವಿಜೇತ, ಅಜೆಂಟಿನಾ ಫುಟ್ಬಾಲ್ ತಂಡದ ನಾಯಕ ಲಿಯೋನಲ್ ಮೆಸ್ಸಿ (Lionel Messi) ಅವರ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮೆಸ್ಸಿಗೂ ಬೆದರಿಕೆ ನೀಡಿದ್ದಾರೆ.

ರಾತ್ರೋ ರಾತ್ರಿ ಬಂದ ಇಬ್ಬರು ಬಂದೂಕುದಾರಿಗಳು ಸೂಪರ್ ಮಾರ್ಕೆಟ್ (Messi Super Market) ಮುಂಭಾಗಕ್ಕೆ 14 ಗುಂಡುಗಳನ್ನು ಹಾರಿಸಿದ್ದಾರೆ. ಜೊತೆಗೆ `ಮೆಸ್ಸಿ, ನಾವು ನಿಮಗಾಗಿ ಕಾಯುತ್ತಿದ್ದೇವೆ. ಜಾವ್ಕಿನ್ ಒಬ್ಬ ನಾರ್ಕೋ, ಅವನು… ನಿನ್ನನ್ನ ನೋಡಿಕೊಳ್ಳುವುದಿಲ್ಲ’ ಎಂದು ಕೈಬರಹ ಸಂದೇಶವನ್ನು ಬರೆದುಹೋಗಿದ್ದಾರೆ. ಆ ಸಮಯದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ

ಪಾಬ್ಲೊ ಜಾವ್ಕಿನ್ ಅವರು ಮೆಸ್ಸಿಯ ತವರು ರೊಸಾರಿಯೊದ ಮೇಯರ್ ಆಗಿದ್ದಾರೆ. ಅಲ್ಲಿ ಮೆಸ್ಸಿ ಕುಟುಂಬದ ಸೂಪರ್ ಮಾರ್ಕೆಟ್ ಇದೆ. ಇದು ರಾಜಧಾನಿ ಬ್ಯೂನಸ್ ಐರಿಸ್ ನಿಂದ ವಾಯುವ್ಯಕ್ಕೆ 320 ಕಿಮೀ ದೂರದಲ್ಲಿದೆ.

ಇಬ್ಬರು ವ್ಯಕ್ತಿಗಳು 3 ಗಂಟೆ ಸುಮಾರಿಗೆ ಮೋಟಾರ್ ಬೈಕ್‌ನಲ್ಲಿ ಬಂದಿರುವುದನ್ನು ಪ್ರತ್ಯಕ್ಷದರ್ಶಿಗಳು ದೃಢಪಡಿಸಿದ್ದಾರೆ. ಅವರಲ್ಲಿ ಒಬ್ಬರು ಇಳಿದು ಗುಂಡು ಹಾರಿಸಿದ ಎಂದಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು (Police) ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. 

ರೊಸಾರಿಯೊ ಪರಾನಾ ನದಿಯ ಬಂದರು ನಗರವಾಗಿದೆ. ಇದೀಗ ಮಾದಕವಸ್ತು ಕಳ್ಳಸಾಗಣೆಯ ಕೇಂದ್ರವಾಗಿ ಮಾರ್ಪಟ್ಟಿದ್ದು, ಅರ್ಜೆಂಟಿನಾದ ಅತ್ಯಂತ ಹಿಂಸಾತ್ಮಕ ನಗರ ಎನಿಸಿಕೊಂಡಿದೆ. 2022ರಲ್ಲಿಯೂ ಈ ನಗರದಲ್ಲಿ 287 ಹತ್ಯೆಗಳು ನಡೆದಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ