ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಹಂದಿ ಮನೆಯಲ್ಲಿ ಪೊಲೀಸ್‌ ದೌರ್ಜನ್ಯ ಪ್ರಕರಣ : ಐವರು ಪೋಲಿಸ್ ರು ಠಾಣೆಯಿಂದ ಶಿಫ್ಟ್‌.

Twitter
Facebook
LinkedIn
WhatsApp
ಮೆಹಂದಿ ಮನೆಯಲ್ಲಿ ಪೊಲೀಸ್‌ ದೌರ್ಜನ್ಯ ಪ್ರಕರಣ : ಐವರು ಪೋಲಿಸ್ ರು ಠಾಣೆಯಿಂದ ಶಿಫ್ಟ್‌.

ಕೋಟ : ಮೆಹಂದಿ ನಡೆಯುತ್ತಿದ್ದ ವೇಳೆಯಲ್ಲಿ ಕೊರಗ ಸಮುದಾಯದ ಮನೆಗೆ ನುಗ್ಗಿ ಲಾಠಿಚಾರ್ಜ್‌ ನಡೆಸಿ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಠಿಚಾರ್ಜ್‌ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕೋಟ ಠಾಣೆಯ ಪಿಎಸ್‌ಐ ಸಂತೋಷ್‌ ಹಾಗೂ ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಶಿಫ್ಟ್‌ ಮಾಡಿ ಉಡುಪಿ ಎಸ್‌.ಪಿ. ವಿಷ್ಣುವರ್ಧನ್‌ ಅವರು ಆದೇಶ ಹೊರಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೋಟ ದೌರ್ಜನ್ಯ ಪ್ರಕರಣದ ಕುರಿತು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ಬುಧವಾರ ಸಂಜೆಯ ಒಳಗಾಗಿ ಪೂರ್ಣ ಗೊಳ್ಳುವ ನಿರೀಕ್ಷೆಯಿದೆ. ವಿಚಾರಣೆ ಮುಗಿಯುವರೆಗೆ ಪಿಎಸ್‌ಐ ಸಂತೋಷ್‌ ಹಾಗೂ ಆರೋಪ ಹೊತ್ತಿರುವ ಸಿಬ್ಬಂದಿಗಳನ್ನು ಠಾಣೆಯಿಂದ ಶಿಫ್ಟ್‌ ಮಾಡಲಾಗಿದೆ. ಹೀಗಾಗಿ ಅವರು ಕೋಟ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದು ಆದೇಶಿಸಿದ್ದಾರೆ. ಮೆಹಂದಿ ಮನೆಯಲ್ಲಿ ಲೌಡ್‌ ಸ್ಪೀಕರ್‌ ಅವಧಿ 10ಗಂಟೆ ಮೀರಿದ ನಂತರವೂ ನಡೆಯುತ್ತಿತ್ತು. ಹೀಗಾಗಿ ಸ್ಥಳೀರು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಎಚ್‌ಓ ಅವರು ಸ್ಥಳಕ್ಕೆ ಭೇಟಿ ನೀಡಿ ಸೌಂಡ್‌ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದಾರೆ. ಆದರೆ ಮತ್ತೆ 112 ಗೆ ದೂರು ಬಂದ ಹಿನ್ನಲೆಯಲ್ಲಿ ಪಿಎಸ್ಐ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ಘಟನೆ ನಿಜವಾಗಿದ್ದರೆ ಖಂಡಿತಾವಾಗಿಯೂ ಕ್ರಮಕೈಗೊಳ್ಳುತ್ತೇವೆ. ಇಲಾಖೆಯ ಬಗ್ಗೆ ನಂಬಿಕೆ ಇರಲಿ. ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುತ್ತೇನೆ ಎಂದು ವಿಷ್ಣುವರ್ಧನ್‌ ಅವರು ತಿಳಿಸಿದ್ದಾರೆ.

ಕೊರಗ ಕುಟುಂಬದ ಮೇಲೆ ಹಲ್ಲೆ ಪೊಲೀಸರ ಮೇಲೆ ಕ್ರಮಕ್ಕೆ: ಸಚಿವ ಕೋಟ ಸೂಚನೆ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದ ಸಮಾರಂಭವೊಂದಕ್ಕೆ ಏಕಾಏಕಿ ದಾಳಿ ಮಾಡಿದ ಪೊಲೀಸರು, ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸಿದ್ದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸದ್ರಿ ಕುಟುಂಬಗಳು ನನಗೆ ಪರಿಚಯವಿದ್ದು, ಅಲ್ಲಿರುವ 9ಕ್ಕೂ ಹೆಚ್ಚು ಕುಟುಂಬದವರು ಅಮಾಯಕರಾಗಿದ್ದು, ಅವರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು ಇಂತಹ ಚಟುವಟಿಕೆಗಳನ್ನು ಸರಕಾರ ಸಹಿಸುವುದಿಲ್ಲ. ಈಗಾಗಲೇ ಮಾನ್ಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಪೋಲಿಸರ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಹೇಳಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಾರ್ಟಿಯ ರಾಜ್ಯ ಕಾರ್ಯಕಾರಣಿಯಲ್ಲಿ ತಾನು ಭಾಗವಹಿಸಿದ್ದು, ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರ ಜೊತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ. ಸಂತ್ರಸ್ತ ಕೊರಗ ಜನಾಂಗಕ್ಕೆ ನ್ಯಾಯ ಒದಗಿಸುವಲ್ಲಿ ಮತ್ತು ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾವುದೇ ಆತಂಕ ಬೇಡ. ನಾಳೆ ಸದ್ರಿ ಕೊರಗರ ಜನಾಂಗದ ಕೇರಿಗೆ ತಾನು ಭೇಟಿ ನೀಡಲಿದ್ದು, ನೊಂದ ಕುಟುಂಬದ ಜೊತೆ ಚರ್ಚಿಸುವುದಾಗಿ ಸಚಿವ ಕೋಟ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋಟ ಪಿಎಸ್‌ಐ ಸಂತೋಷ್‌ ವಿರುದ್ದಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಜಿಲ್ಲಾ ಬಿಜೆಪಿ ಒತ್ತಾಯ
ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಕೊರಗ ಸಮುದಾಯದ ಮದುವೆ ಮನೆಗೆ ಮೆಹಂದಿ ಸಂದರ್ಭದಲ್ಲಿ ನುಗ್ಗಿ ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಅಮಾನವೀಯ ಕ್ರಮವನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು