ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಲ್ಮನೆ ಚುನಾವಣೆ: ಅಭ್ಯರ್ಥಿ ವಿಚಾರದಲ್ಲಿ ಸಿದ್ಧು ಜೊತೆಗೆ ಭಿನ್ನಾಭಿಪ್ರಾಯವಿಲ್ಲ- ಡಿಕೆಶಿ

Twitter
Facebook
LinkedIn
WhatsApp
ಮೇಲ್ಮನೆ ಚುನಾವಣೆ: ಅಭ್ಯರ್ಥಿ ವಿಚಾರದಲ್ಲಿ ಸಿದ್ಧು ಜೊತೆಗೆ ಭಿನ್ನಾಭಿಪ್ರಾಯವಿಲ್ಲ- ಡಿಕೆಶಿ

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಹೈಕಮಾಂಡ್ ಗೆ ಶಿಫಾರಸು ಮಾಡಬೇಕಾದ ಅಭ್ಯರ್ಥಿ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮೇಲ್ಮನೆಯ ಏಳು ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 24 ಕೊನೆಯ ದಿನವಾಗಿದ್ದು, ಅಭ್ಯರ್ಥಿ ಹೆಸರನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಿ, ಹೈಕಮಾಂಡ್ ಗೆ ಶಿಫಾರಸು ಮಾಡಲಾಗುವುದು ಎಂದರು.

ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ಹಂಚಿಕೊಳ್ಳುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿದೆ. ಸುಮಾರು 100 ಆಕಾಂಕ್ಷಿಗಳಿದ್ದಾರೆ. ಕೆಲವರು ಮನವಿ ಸಲ್ಲಿಸಿಲ್ಲ ಆದರೆ, ಬೇಕಾದ ಅರ್ಹತೆ ಹೊಂದಿದ್ದಾರೆ. ಎಲ್ಲರನ್ನೂ ಪರಿಗಣಿಸಿ ಶಿಫಾರಸ್ಸು ಮಾಡಲಾಗುವುದು, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ರಾಜ್ಯ ಘಟಕ ಹೆಸರನ್ನು ಮಾತ್ರ ಶಿಫಾರಸು ಮಾಡಲಿದೆ ಆದರೆ, ಯಾರಿಗೆ ಟಿಕೆಟ್ ನೀಡಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.

ಅಭ್ಯರ್ಥಿ ವಿಚಾರದಲ್ಲಿ ಸಿದ್ದು ಜೊತೆಗೆ ಭಿನ್ನಾಭಿಪ್ರಾಯವಿದೆ ಎಂಬಂತಹ ವರದಿಗಳ ಕುರಿತಂತೆ ಪ್ರತಿಕ್ರಿಯಿಸಿದ ಡಿಕೆಶಿ, ಇಬ್ಬರು ಚರ್ಚಿಸಿ, ಒಮ್ಮತದಿಂದ ಹೆಸರನ್ನು ಕಳುಹಿಸಲಾಗುವುದು, ಎರಡು ಸ್ಥಾನಗಳು ಮಾತ್ರ ಇವೆ. ಎಷ್ಟು ಹೆಸರನ್ನು ಕಳುಹಿಸಲು ಸಾಧ್ಯ?ಎಲ್ಲಾ ಅಂಶಗಳನ್ನು ಪರಿಗಿಣಿಸಿ ಹೆಸರನ್ನು ಶಿಫಾರಸು ಮಾಡಲಾಗುವುದು, ಹೈಕಮಾಂಡ್ ಅಂತಿಮವಾಗಿ ನಿರ್ಧರಿಸಲಿದೆ ಎಂದು ಹೇಳಿದರು.  ಏಳು ವಿಧಾನಪರಿಷತ್ ಸದಸ್ಯರ ಅವಧಿ ಜೂನ್ 24ಕ್ಕೆ ಮುಗಿಯಲಿದ್ದು, ಜೂನ್ 3 ರಂದು ಚುನಾವಣೆ ನಡೆಯಲಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ