ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!

Twitter
Facebook
LinkedIn
WhatsApp
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!

ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ (Amit Shah) ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದಾರೆ. ನೇಹಾ (Neha Murder Case) ಕುಟುಂಬಸ್ಥರಿಗೆ ಸಾಂತ್ವನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ನಗರದ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೆಯೇ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು. ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು. ಆತನ ಹಿಂದೆ ಯಾರು ಇದ್ದಾರೆ ಯಾರ ಕೈವಾಡವಿದೆ ಅನ್ನೋದನ್ನ ತನಿಖೆ ನಡೆಸಬೇಕು. ಹತ್ಯೆಗೆ ಯಾರು ಪ್ರೇರಣೆ ಕೊಟ್ಟಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಲೇಜ್ ಕ್ಯಾಂಪಸ್ ಒಳಗೆ ಇಂತಹ ಘಟನೆಗಳು ಮುಂದೆ ಆಗಬಾರದು ಅದಕ್ಕೆ ಸ್ಪೆಷಲ್ ಆ್ಯಕ್ಟ್ ತರಬೇಕು. ಆವಾಗ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದು. ನಿರಂಜನ ಅವರು ಕಾಂಗ್ರೆಸ್ ಕಾರ್ಪೊರೇಟರ್​ ಇದ್ದಾರೆ. ಅವರಿಗೆ ನಾವು ಸಾಂತ್ವನ ಹೇಳೋದು ಹೇಗೆ ರಾಜಕಾರಣ ಆಗುತ್ತೆ. ಇಂತಹ ಘಟನೆಗಳು ನಡೆದಾಗ ಎಲ್ಲರೂ ಬಂದು ಸಾಂತ್ವನ ಹೇಳುತ್ತಾರೆ ಆದರೆ ಇದನ್ನ ಕಾಂಗ್ರೆಸ್ ರಾಜಕಾರಣ ಅಂತ ಶಬ್ದ ಬಳಸಬಾರದು. ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ ಎಂದಿದ್ದಾರೆ.

ಘಟನೆ ಆದ ನಂತರ ಹತ್ಯೆಯ ಸಾಧಕ ಬಾಧಕಗಳ ಬಗ್ಗೆ ವಿಚಾರ ಮಾಡಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವರು ಹೇಳಿಕೆ ನೀಡಬೇಕಿತ್ತು. ನಂತರ ಅವರ ಮನೆಗೆ ಬಂದು ಸಾಂತ್ವನ ಹೇಳಿ ಕ್ಷಮೆಯಾಚಿಸಿದ್ದಾರೆ. ಸಿಐಡಿ ಅಧಿಕಾರಿಗಳು ಪಕ್ಷಾತೀತವಾಗಿರುತ್ತಾರೆ. ನ್ಯಾಯ ಕೊಡಿಸುವ ದೃಷ್ಟಿಯಿಂದಲೇ ಸಿಎಂ ಅವರು ಸಿಐಡಿಗೆ ವಹಿಸಿದ್ದಾರೆ. ಹಾಗಾಗಿ ಯಾರಿಗೂ ಇದರಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿರೋದಿಲ್ಲ.

ಸದ್ಯ ತನಿಖೆ ನಡೆಯುತ್ತಿದೆ ನಡೆಯಿಲಿ. ತನಿಖೆ ನಮಗೆ ಸಮರ್ಪಕವಾಗಿಲ್ಲ ಅನಿಸಿದರೆ ನಾವು ಮುಂದೆ ಹೋರಾಟ ಮಾಡುತ್ತೇವೆ. ಒಂದು ವೇಳೆ ತನಿಖೆಯ ದಾರಿ ಯಾರಾದರೂ ತಪ್ಪಿಸುವ ಕೆಲಸ ಮಾಡಿದರೂ ಕೂಡ ಉಗ್ರವಾದ ಹೋರಾಟ ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ