ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೇ. 29ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಆರಂಭ

Twitter
Facebook
LinkedIn
WhatsApp
whatsapp 3170dc38e8bf44a2 5

ಬೆಂಗಳೂರು, ಏ 01 : ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ.

ಮೊದಲ ಅವಧಿ ಮೇ 29ರಿಂದ ಅಕ್ಟೋಬರ್‌ 7ರ ತನಕ ಇರಲಿದ್ದು, ಅಕ್ಟೋಬರ್‌ 8ರಿಂದ ಅಕ್ಟೋಬರ್‌ 24ರ ತನಕ ದಸರಾ ರಜೆ ಇರಲಿದೆ.

ಇನ್ನು ಎರಡನೇ ಅವಧಿ ಅಕ್ಟೋಬರ್‌ 25ರಿಂದ 2024ರ ಎಪ್ರಿಲ್ 10ರ ವರೆಗೆ ಇರಲಿದೆ. ಎ.11ರಿಂದ ಬೇಸಗೆ ರಜೆ ಪ್ರಾರಂಭಗೊಳ್ಳಲಿದ್ದು ಮೇ 28ರ ವರೆಗೆ ರಜೆ ಇರಲಿದೆ.

ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಏಕರೂಪದ ಶೈಕ್ಷಣಿಕ ಚಟುವಟಿಕೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆ ಸೂಚಿಸಲಾಗಿದೆ.

ಇನ್ನು ಕೊರೊನಾದಿಂದಾಗಿ ಉಂಟಾದ ಕಲಿಕಾ ಹಿನ್ನಡೆಯನ್ನು/ಕಲಿಕಾ ಕೊರತೆಯನ್ನು ಸರಿದೂಗಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲೇ ಕಳೆದ ಬಾರಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ