ಮೇ 7 ರಂದು ಕರಾವಳಿಗೆ ಪ್ರಿಯಾಂಕಾ ಗಾಂಧಿ
Twitter
Facebook
LinkedIn
WhatsApp
ಮಂಗಳೂರು, ಮೇ 06 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಅವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.