ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?

Twitter
Facebook
LinkedIn
WhatsApp
ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?

ಏಪ್ರಿಲ್ 26ರಂದು ಜರ್ಮನಿಗೆ ತೆರಳಿದ್ದ ಪ್ರಜ್ವಲ್ ಅಂದೇ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದರು. ಮೇ 15ಕ್ಕೆ ವಾಪಸ್ ಬರಲು ರಿಟರ್ನ್ ಟಿಕೆಟ್ ಬುಕ್ ಆಗಿತ್ತು. ಇದಾದ ಬಳಿಕ ಎಸ್​ಐಟಿ ನೋಟಿಸ್ ಹಿನ್ನೆ ಮೇ 3ಕ್ಕೆ ವಾಪಸ್ ಬರಲು ಮತ್ತೊಂದು ಟಿಕೆಟ್ ಬುಕ್ ಮಾಡಲಾಗಿತ್ತು. ಇನ್ನು ಪ್ರಜ್ವಲ್​ಗಾಗಿ ಎಸ್​ಐಟಿ ಅಧಿಕಾರಿಗಳು 2 ದಿನದಿಂದ ಕಾಯುತ್ತಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್​ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಇಮಿಗ್ರೇಷನ್​ನಲ್ಲಿ ಬೆಂಗಳೂರಿಗೆ ಬರುವ ವಿಮಾನಗಳ ಪ್ರಯಾಣಿಕರ ಲಿಸ್ಟ್ ಪರಿಶೀಲನೆ ನಡೆಸಿದ್ದಾರೆ. ಪ್ರಜ್ವಲ್ ಪಾಸ್​ಪೋರ್ಟ್ ನಂಬರ್ ಸಮೇತ ಟಿಕೆಟ್ ಪರಿಶೀಲನೆ ಮಾಡಿದ್ದಾರೆ. ಆದರೆ, ಈವರೆಗೂ ಯಾವುದೇ ಫ್ಲೈಟ್​ನಲ್ಲಿ ಪ್ರಜ್ವಲ್ ಟಿಕೆಟ್ ಬುಕ್ ಆಗಿಲ್ಲ. ದುಬೈ, ಮಸ್ಕತ್, ಫ್ರಾಂಕ್​ಫರ್ಟ್ ಸೇರಿ ಹಲವು ದೇಶಗಳ ವಿಮಾನಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಎರಡು ಪಾಳಿಯಲ್ಲಿ ಎರಡು ತಂಡಗಳಿಂದ ಏರ್ಪೋಟ್​ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಜ್ವಲ್​ಗೆ ಬಂದ್ರೆ ಏರ್ಪೋಟ್​ನಿಂದಲೇ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ತಂದೆ ಹೆಚ್‌ಡಿ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶರಣಾಗಲಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಸಿಎಸ್ ಪುಟ್ಟರಾಜು ಸುಳಿವು ನೀಡಿದ್ದರು. ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿತ್ತು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ಏತನ್ಮಧ್ಯೆ, ಸೆಕ್ಸ್ ವಿಡಿಯೋ ಹಗರಣದ ಸಂತ್ರಸ್ತರೊಬ್ಬರನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಲು ಬೆಂಗಳೂರಿನ ಬಸವನಗುಡಿಯಲ್ಲಿರುವ ಎಚ್‌ಡಿ ರೇವಣ್ಣ ಅವರ ನಿವಾಸಕ್ಕೆ ಕರೆದೊಯ್ದಿದ್ದಾರೆ. ಇನ್ನೂ ಎಸ್ ಐ ಟಿ ವಶದಲ್ಲಿರುವ ಮಾಜಿ ಸಚಿವ ರೇವಣ್ಣ ಅಧಿಕಾರಿಗಳು ಕೇಳುವ ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಏನೇ ಪ್ರಶ್ನೆ ಕೇಳಿದರೂ ನನಗೆ ಗೊತ್ತಿಲ್ಲ, ನಾನು ಏನು ಮಾಡಿಲ್ಲ, ನನ್ನ ರಾಜಕೀಯ ಭವಿಷ್ಯ ಹಾಳು ಮಾಡಲು ಪಿತೂರಿ ನಡೆಸಿದ್ದಾರೆ ಎಂದು ಹೇಳುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ