ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೈತ್ರಿಗೆ ನಾವು ಸಿದ್ಧ ; ನನಗೆ ಮೈತ್ರಿ ಮಾಡಿಕೊಳ್ಳುವಲ್ಲಿ ಯಾವುದೇ ಅಸಮಾಧಾನವಿಲ್ಲ - ಹೆಚ್. ಡಿ ಕುಮಾರಸ್ವಾಮಿ

Twitter
Facebook
LinkedIn
WhatsApp
Untitled 6

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮತದಾನ(Voting) ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ(HD Kumaraswamy) ತಿಳಿಸಿದ್ದಾರೆ.

ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಮತ್ತೊಂದೆಡೆ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲೇ ಬಿಜೆಪಿ ಕಾದು ಕುಳಿತಿದೆ. ಹೀಗಾಗಿ ಜೆಡಿಎಸ್ ಪಕ್ಷದ ಸಹಾಯ ಹಸ್ತದತ್ತ ಚಿತ್ತ ನೆಟ್ಟಿದ್ದು ಒಳಗೊಳಗೆ ಕಸರತ್ತು ಶುರುವಾಗಿದೆ. ಇನ್ನು ಮತ ಎಣಿಕೆಯ ದಿನ (ಮೇ 10) ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದು, ಕ್ಸಿಟ್ ಪೋಲ್​ಗಳ ಬಗ್ಗೆ ಮಾತನಾಡಿದ್ದಾರೆ. ಹಾಗೂ ಅವುಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಮೂಲಕ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.

ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ನಿಟ್ಟ ನಿಲುವನ್ನು ಹೊಂದಿದ್ದಾರೆ. ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸ್ಥೂಲವಾಗಿ ಹೇಳುವುದಾದರೆ, ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು. ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು. ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ. ಹಾಗೂ ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist