ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಮೇಲೆ ಹೆಬ್ಬಾವು ಬಿಟ್ಟುಕೊಂಡ ನಟಿ ಶರ್ಮಿತಾ

Twitter
Facebook
LinkedIn
WhatsApp
sharmitha gowda

ಕಿರುತೆರೆಯ ಜನಪ್ರಿಯ ‘ಗೀತಾ’ (Geetha) ಸೀರಿಯಲ್‌ನ ಖಳನಟಿಯಾಗಿ ಶರ್ಮಿತಾ ಗೌಡ (Sharmitha Gowda) ಕಾಣಿಸಿಕೊಂಡಿದ್ದಾರೆ. ಮಂಥರೆಯಾಗಿ ಕಿರುತೆರೆಯಲ್ಲಿ ಮೋಡಿ ಮಾಡ್ತಿದ್ದಾರೆ. ಸದ್ಯ ನಟಿ ವೆಕೇಷನ್ ಮೂಡ್‌ನಲ್ಲಿದ್ದಾರೆ. ಹೆಬ್ಬಾವನ್ನ ಭುಜದ ಮೇಲೆ ಹೊತ್ತುಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಕುರಿತ ಫೋಟೋ, ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಗೀತಾ ಸೀರಿಯಲ್, ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಶರ್ಮಿತಾ ಗೌಡ ಸೈ ಎನಿಸಿಕೊಂಡಿದ್ದಾರೆ. ಆಗಾಗ ಶೂಟಿಂಗ್‌ಗೆ ಬ್ರೇಕ್ ಇದ್ದಾಗ ಹೊಸ ಜಾಗಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಆಗಾಗ ಬಿಕಿನಿ ಫೋಟೋ ಶೇರ್ ಮಾಡುತ್ತಾ, ಪಡ್ಡೆಹುಡುಗರ ನಿದ್ದೆಗೆಡಿಸುತ್ತಾರೆ. ಸದ್ಯ ವಿದೇಶಕ್ಕೆ ನಟಿ ಹಾರಿದ್ದಾರೆ.

ಇದೀಗ ಶರ್ಮಿತಾ ನೀಲಿ ಬಣ್ಣದ ಬಾಡಿಕಾನ್ ಡ್ರೆಸ್‌ನಲ್ಲಿ ಹೆಬ್ಬಾವನ್ನು ಭುಜದ ಮೇಲೆ ಹೊತ್ತುಕೊಂಡಿರುವ ಫೋಟೊ ಹಂಚಿಕೊAಡಿದ್ದಾರೆ. ಹಾವು ಅಂದ್ರೆ ಜನ ಹೆದರುತ್ತಾರೆ. ಇನ್ನು ಹಾವನ್ನು ನೋಡಿದರೆ ಓಡಿ ಹೋಗುತ್ತಾರೆ. ಅದರಲ್ಲೂ ಹೆಬ್ಬಾವನ್ನು ನಟಿ ಶರ್ಮಿತಾ ಹೊತ್ತುಕೊಂಡಿರುವುದು ನೋಡಿ ಕೆಲವರು ಹುಬ್ಬೇರಿಸಿದ್ದಾರೆ. ಅಭಿಮಾನಿಗಳು ಬಹಳ ನೀವು ಬೋಲ್ಡ್, ಗ್ರೇಟ್, ಹುಷಾರು ಎಂದೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಕಿರುತೆರೆ ಮಾತ್ರವಲ್ಲ ಸಿನಿಮಾಗಳಿಗೂ ನಟಿ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ. ನಟನೆಗೆ ಆದ್ಯತೆಯಿರುವ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಹಾಗೆಯೇ ಪರಭಾಷೆಯ ಸೀರಿಯಲ್‌ನಲ್ಲಿಯೂ ಕಾಣಿಸಿಕೊಳ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ