ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನ ಹುಡುಗಿಗೆ ವಂಚನೆ-ಮುಡಿಪು ವಿನ ಯುವಕ ಬಂಧನ.

Twitter
Facebook
LinkedIn
WhatsApp
ಮೈಸೂರಿನ ಹುಡುಗಿಗೆ ವಂಚನೆ – ಮುಡಿಪುವಿನ ಯುವಕ ಬಂಧನ.

ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ, ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ.
ಬಂಧಿತ ಆರೋಪಿಯನ್ನು ಮುಹಮ್ಮದ್ ಅಜ್ವಾನ್ (32) ಎಂದು ಗುರುತಿಸಲಾಗಿದೆ.

ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ಯುವತಿಯ ಮೇಲೆ ಅತ್ಯಾಚಾರ, ಸುಲಿಗೆ ಪ್ರಕರಣ ದಾಖಲಾಗಿತ್ತು. ಮೈಸೂರಿನಲ್ಲಿ 2019ರಲ್ಲಿ ಅಜ್ವಾನ್ ಜತೆ ತಾನು ಸಂರ್ಪಕದಲ್ಲಿದ್ದುದಾಗಿ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೊಬೈಲ್ ರಿಚಾರ್ಜಿಂಗ್ ಶಾಪ್‌ನಲ್ಲಿ ಕೆಲಸಕ್ಕಿದ್ದ ಅಜ್ವಾನ್ ತನ್ನನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಯುವತಿ ತಿಳಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮುಡಿಪು ಮೂಲದ ಯುವಕನಿಂದ ದೌರ್ಜನ್ಯಕ್ಕೊಳಗಾದ ಯುವತಿ ಸೆ. 21ರಂದು ಮಧ್ಯಾಹ್ನ ಯುವಕನ ಮನೆಗೆ ತೆರಳಿದ್ದರು. ಆ ಸಂದರ್ಭ ಆತನ ತಂದೆ, ತಾಯಿ ಅಜ್ಜಿ ಹಾಗೂ ಇಬ್ಬರು ಸಹೋದರಿಯರು ಮನೆಯಲ್ಲಿದ್ದರು. ಆತನನ್ನು ಮನೆಗೆ ಕರೆಸುವವರೆಗೆ ತಾನು ಇಲ್ಲಿಂದ ಹೋಗುವುದಿಲ್ಲ ಎಂದಾಗ ಮನೆಯವರಲ್ಲಿ ಒಬ್ಬರು ಆಕೆಯ ಕಪಾಳಕ್ಕೆ ಬಾರಿಸಿ ಕಳುಹಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಯ ಮನೆಯಿಂದ ಹೊರಟ ಆಕೆ ದು:ಖದಿಂದ ಬಸ್ಸು ನಿಲ್ದಾಣದಲ್ಲಿದ್ದಾಗ ಅಲ್ಲಿದ್ದ ಸಾರ್ವಜನಿಕರು 112ಗೆ ಕರೆ ಮಾಡಿದ್ದಾಗ ಕೊಣಾಜೆ ಠಾಣೆಯಿಂದ ಪೊಲೀಸರು ವಾಹನದ ಮೂಲಕ ಆಕೆಯನ್ನು ಸಂಪರ್ಕಿಸಿ ಠಾಣೆಗೆ ಕರೆತಂದು ಸಾಂತ್ವಾನ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376, 384 ಮತ್ತು 323ರಡಿ ಪ್ರಕರಣ ದಾಖಲಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು