ಮೈಸೂರು ಕೆಎಸ್ಆರ್ಪಿ ವಸತಿ ಗೃಹದಲ್ಲಿ ಮಹಿಳಾ ಕಾನ್ಸಟೇಬಲ್ ನೇಣಿಗೆ ಶರಣು
Twitter
Facebook
LinkedIn
WhatsApp
ಮೈಸೂರು: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ (Mysore) ಕೆಎಸ್ಆರ್ಪಿ (KSRP) ವಸತಿಗೃಹದ ಮನೆಯಲ್ಲಿ ನಡೆದಿದೆ.
ಗೀತಾ (32) ಮೃತ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ.
ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.