ಮೈಸೂರು: ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು
Twitter
Facebook
LinkedIn
WhatsApp
ಮೈಸೂರು(ಮಾ.30): ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಮೇಲೆ ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಿನ್ನೆ(ಬುಧವಾರ) ನಡೆದಿದೆ.
ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ತೀವ್ರ ಅಸ್ವಸ್ಥನಾಗಿದ್ದ ಮಹದೇವವನ್ನ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.