ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರು: ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು

Twitter
Facebook
LinkedIn
WhatsApp
All about coconut tree 23

ಮೈಸೂರು(ಮಾ.30):  ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಮೇಲೆ ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಿನ್ನೆ(ಬುಧವಾರ) ನಡೆದಿದೆ. 

ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. 

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ತೀವ್ರ ಅಸ್ವಸ್ಥನಾಗಿದ್ದ ಮಹದೇವವನ್ನ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ