ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊದಲ ಓವರ್​ನಲ್ಲೇ 20 ರನ್​ ಕಲೆಹಾಕಿದ ಜೈಸ್ವಾಲ್; 4,4,4,0,4,4

Twitter
Facebook
LinkedIn
WhatsApp
ಮೊದಲ ಓವರ್​ನಲ್ಲೇ 20 ರನ್​ ಕಲೆಹಾಕಿದ ಜೈಸ್ವಾಲ್; 4,4,4,0,4,4

IPL 2023: ಐಪಿಎಲ್​ನ 11ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ದುಕೊಂಡಿತ್ತು.

ಅದರಂತೆ ಆರ್​ಆರ್ ಪರ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ವೇಳೆ ಸ್ಟ್ರೈಕ್​ ತೆಗೆದುಕೊಂಡ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಿಡಿಲಬ್ಬರದ ಆರಂಭ ಒದಗಿಸಿದರು.

ಖಲೀಲ್ ಅಹ್ಮದ್ ಎಸೆದ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತಕ್ಕೆ ಫೋರ್ ಬಾರಿಸುವ ಮೂಲಕ ಶುಭಾರಂಭ ಮಾಡಿದ ಜೈಸ್ವಾಲ್, 2ನೇ ಎಸೆತವನ್ನು ಕೂಡ ಬೌಂಡರಿಗಟ್ಟಿದರು. ಇನ್ನು ಮೂರನೇ ಎಸೆತದಲ್ಲೂ ಫೋರ್ ಬಾರಿಸಿ ಹ್ಯಾಟ್ರಿಕ್ ಬೌಂಡರಿ ಸಿಡಿಸಿದರು.

ಆದರೆ ನಾಲ್ಕನೇ ಎಸೆತದ ಮೂಲಕ ಯಶಸ್ವಿ ಜೈಸ್ವಾಲ್ ಅವರನ್ನು ವಂಚಿಸುವಲ್ಲಿ ಖಲೀಲ್ ಅಹ್ಮದ್ ಯಶಸ್ವಿಯಾದರು. ಆದರೆ 5ನೇ ಹಾಗೂ 6ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್​ ಬಾರಿಸಿ ಜೈಸ್ವಾಲ್ ಒಟ್ಟು 20 ರನ್​ ಕಲೆಹಾಕಿದರು.

ವಿಶೇಷ ಎಂದರೆ ಇದು ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಆಗಿದೆ. ಅಂದರೆ ಐಪಿಎಲ್ 2023ರಲ್ಲಿ ಇದುವರೆಗೆ ನಡೆದ 12 ಪಂದ್ಯಗಳಲ್ಲಿ ಯಾವುದೇ ಬ್ಯಾಟರ್ ಮೊದಲ ಓವರ್​ನಲ್ಲೇ 20 ರನ್​ ಕಲೆಹಾಕಿಲ್ಲ. ಇದಾಗ್ಯೂ ಇದು ಐಪಿಎಲ್​ನ ಐತಿಹಾಸಿಕ ದಾಖಲೆಯಂತು ಅಲ್ಲ.

ಐಪಿಎಲ್​ ಇನಿಂಗ್ಸ್​ನ ಮೊದಲ ಓವರ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ದಾಖಲೆ ಕ್ರಿಸ್ ಗೇಲ್-ಮಯಾಂಕ್​ ಅಗರ್ವಾಲ್​ ಹೆಸರಿನಲ್ಲಿದೆ. 2011 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಗೇಲ್-ಅರ್ಗವಾಲ್ ಜೊತೆಗೂಡಿ ಅಬು ನಚೀಮ್ ಎಸೆದ ಮೊದಲ ಓವರ್​ನಲ್ಲಿ ಒಟ್ಟು 27 ರನ್​ ಕಲೆಹಾಕಿದ್ದರು.

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 199 ರನ್​ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 142 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಂಜು ಸ್ಯಾಮ್ಸನ್ ಪಡೆ 57 ರನ್​ಗಳ ಭರ್ಜರಿ ಜಯ ಸಾಧಿಸಿತು. ಹಾಗೆಯೇ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ನೊಂದಿಗೆ 60 ರನ್​ ಬಾರಿಸಿದ ಯಶಸ್ವಿ ಜೈಸ್ವಾಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ