ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೋದಿ ಜನಪ್ರಿಯತೆ ವಾರಣಾಸಿಯಲ್ಲಿ ಕುಗ್ಗಿತೇ.? ಹಳೆಯ ಗೆಲುವಿಗೆ ಹೋಲಿಸಿದರೆ ಕೇವಲ 1.5 ಲಕ್ಷ ಅಂತರಕ್ಕೆ ಗೆಲುವು...!

Twitter
Facebook
LinkedIn
WhatsApp
ಮೋದಿ ಜನಪ್ರಿಯತೆ ವಾರಣಾಸಿಯಲ್ಲಿ ಕುಗ್ಗಿತೇ.? ಹಳೆಯ ಗೆಲುವಿಗೆ ಹೋಲಿಸಿದರೆ ಕೇವಲ 1.5 ಲಕ್ಷ ಅಂತರಕ್ಕೆ ಗೆಲುವು...!

ಲೋಕಸಭಾ ಚುನಾವಣೆಯಲ್ಲಿ (Lok Sabha election 2024) ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ (NDA Government) ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. 290ಕ್ಕೂ ಅಧಿಕ ಸೀಟುಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿ ಪ್ರಧಾನಿ ಮೋದಿ (Narendra Modi) ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಚುನಾವಣೆಯ ಫಲಿತಾಂಶದ ಮೂಲಕ ಮೋದಿ ಪ್ರಭಾವ ದೇಶದಲ್ಲಿ ಕುಸಿದಿದೆಯೇ ಎಂಬ ಚರ್ಚೆ ಆರಂಭವಾಗಿದೆ. ಅದಕ್ಕಿಂತಲೂ ಎರಡು ಅವಧಿಗೆ ತಾವು ಪ್ರತಿನಿಧಿಸಿದ್ದ ವಾರಾಣಸಿ ಕ್ಷೇತ್ರದಲ್ಲಿಯೂ ಅವರ ಪ್ರಭಾವ ಬಹುತೇಕ ಮಸುಕಾಗಿದೆ ಎಂಬುದೇ ಚರ್ಚೆಯ ಪ್ರಮುಖ ವಸ್ತು.

ಪ್ರಧಾನಿ ಮೋದಿ ಅವರು 2014ರ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಅಜಯ್​ ರಾಯ್​ ವಿರುದ್ಧ 1.5 ಲಕ್ಷ ಮತಗಳ ಅಂತರದಿಂದ ಮಾತ್ರ ಗೆದ್ದಿದ್ದಾರೆ. ವಾಸ್ತವದಲ್ಲಿ ಅವರ ಪಾಲಿಗೆ ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ವಿಜಯ. ಹೀಗಾಗಿ ಅವರ ಅಭಿಮಾನಿಗಳು ಹಾಗೂ ವಾರಾಣಸಿ ಮತದಾರರ ಪಾಲಿಗೆ ಹೆಮ್ಮೆಯ ಸಂಗತಿ. ಪ್ರಧಾನಿ ಮೋದಿ  6,12,970 ಮತಗಳನ್ನು ಪಡೆದಿದ್ದರೆ ಅವರ ಸಮೀಪದ ಪ್ರತಿಸ್ಪರ್ಧಿ ಅಜಯ್​ ರಾಯ್​ 460457 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ಮತಗಳಲ್ಲಿ ಮೋದಿ ಪಾಲಿ ಶೇಕಡಾ 54. 24 ಹಾಗೂ ಪ್ರತಿಸ್ಪರ್ಧಿ ಪಡೆದ ಶೇಕಡಾವಾರು ಮತ 40.74. ಆದರೆ, ಸಾಮಾನ್ಯ ಅಭ್ಯರ್ಥಿಯೊಬ್ಬ ಇಷ್ಟೊಂದು ಅಂತರದಿಂದ ಗೆಲ್ಲುವುದು ಸಾಮಾನ್ಯ ವಿಷಯವಲ್ಲ. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಅವರ ಪಡೆದ ಅಂತರ ಕಡಿಮೆ ಎಂದೇ ಹೇಳಲಾಗುತ್ತಿದೆ.

ಪ್ರಧಾನಿ ಮೋದಿ ಅವರು ಎರಡನೇ ಅವಧಿಗೆ (2019) ವಾರಾಣಸಿಯಲ್ಲಿ 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಆ ಅವಧಿಯಲ್ಲಿ ಅವರು ಸಮೀಪದ ಸ್ಪರ್ಧಿ ಶಾಲಿನಿ ಯಾದವ್ ಅವರನ್ನು ಮಣಿಸಿದ್ದರು. ಅಂತೆಯೇ 2014ರಲ್ಲಿ 3.72 ಲಕ್ಷ ಮತಗಳ ಅಂತರದಲ್ಲಿ ಹಾಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಗೆಲುವು ಕಂಡಿದ್ದರು. 2014ರಲ್ಲಿ ಭರ್ಜರಿ ಅಂತರದಿಂದಲೇ ಗೆದ್ದಿದ್ದ ಅವರು 2019ರಲ್ಲಿ ಭಾರೀ ಅಂತರದ ವಿಜಯ ದಾಖಲಿಸಿದ್ದರು. ಈ ಫಲಿತಾಂಶಗಳು ಮೋದಿಯ ಗೌರವ ಹಾಗೂ ಘನತೆಗೆ ಪೂರಕವಾಗಿತ್ತು. ಪ್ರಧಾನಿ ಮೋದಿ ಎರಡನೇ ಅವಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಅಂತೆಯೇ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವೂ ಅಲ್ಲಿ ದೊಡ್ಡ ಸುಧಾರಣೆ ಮಾಡಿದೆ.

ನರೇಂದ್ರ ಮೋದಿ ಕಳೆದ ಎರಡು ಅವಧಿಗಳಲ್ಲಿ ವಾರಾಣಸಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ವಾಸ್ತವಾಗಿ ಇವೆಲ್ಲವೂ ಮೋದಿಗೆ ನೆರವಾಗಬೇಕಾಗಿತ್ತು. ಪ್ರಧಾನಿಯಾಗಿ ಅವರು ತಾವು ಪ್ರತಿನಿಧಿಸುವ ಕ್ಷೇತ್ರವನ್ನು ಜೋಪಾನವಾಗಿ ನೋಡಿಕೊಂಡಿದ್ದರು. ಆದರೂ ಅವರು ದೊಡ್ಡ ಅಂತರದ ಗೆಲುವನ್ನು ಮತ್ತೊಂದು ದಾಖಲಿಸಲು ವಿಫಲಗೊಂಡಿದ್ದಾರೆ.

2014ರ ಮತ ಎಣಿಕೆ ವೇಳೆ ನರೇಂದ್ರ ಮೋದಿ ಆರಂಭಿಕ ಹಂತದಲ್ಲಿ ಹಿನ್ನಡೆಗೆ ಒಳಗಾಗಿದ್ದರು. ಆರಂಭಿಕ ಸುತ್ತಿನ ವೇಳೆ ಅವರು 6000 ಮತಗಳ ಹಿನ್ನಡೆಯನ್ನೂ ಅನುಭವಿಸಿದ್ದರು. ಇದು ಮತ ಎಣಿಕೆಯನ್ನು ಕುತೂಹಲದಿಂದ ನೋಡುತ್ತಿದ್ದ ಜನರಿಗೆ ಅಚ್ಚರಿಯ ಸಂಗತಿಯಾಗಿತ್ತು. ಆದರೆ, ಮತ್ತೆ ಸುಧಾರಿಸಿಕೊಂಡು ಮುನ್ನಡೆದ ನರೇಂದ್ರ ಮೋದಿ ಗೆಲುವು ಸಾಧಿಸಿದ್ದಾರೆ.

 

ಮೋದಿಯ ಪ್ರತಿಸ್ಪರ್ಧಿ ಅಜಯ್​ ರಾಯ್​ ಮೂಲದಲ್ಲಿ ಎಬಿವಿಪಿ ಹಾಗೂ ಆರ್​ಎಸ್​ಎಸ್​ನವರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದವರು. ಅವರು ಉತ್ತರ ಪ್ರದೇಶ ಬಿಜೆಪಿಯ ರಾಜ್ಯಾಧ್ಯಕ್ಷರೂ ಆಗಿದ್ದರು. ಅಲ್ಲದೆ, ಉತ್ತರ ಪ್ರದೇಶ ವಿಧಾನಸಭೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, 2008ರಲ್ಲಿ ಅವರಿಗೆ ಬಿಜೆಪಿ ಮತ್ತೆ ಟಿಕೆಟ್​ ನಿರಾಕರಿಸಿತ್ತು. ಈ ವೇಳೆ ಮೂಲ ಪಕ್ಷವನ್ನು ತೊರೆದು ಕೈ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

 

ಅಜಯ್​ ರಾಯ್​ 2014ರಲ್ಲಿ ಮತ್ತು 2019ರಲ್ಲಿ ವಾರಾಣಸಿಯಿಂದಲೇ ಸ್ಪರ್ಧಿಸಿದ್ದರು. ಆದರೆ ಎರಡೂ ಬಾರಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದೀಗ ಮೂರನೇ ಬಾರಿಗೂ ಸೋತಿದ್ದಾರೆ. ಆದರೆ ಈ ಬಾರಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಜತೆಗೆ ಒಂದು ಹಂತರದಲ್ಲಿ ಮೋದಿಗೆ ಆತಂಕ ಹುಟ್ಟಿಸಿದ್ದರು

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist