ಮೋದಿ ವಿರುದ್ಧ ವಾರಣಾಸಿಯಲ್ಲಿ ಮೂರನೇ ಬಾರಿ ಸ್ಪರ್ಧಿಸಿದ್ದ ಅಜಯ್ ರೈ ಸೋಲು.!
Twitter
Facebook
LinkedIn
WhatsApp
ನವದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಅವರು 57,740 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಆರಂಭವಾದಗಿನಿಂದಲೂ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಇದೀಗ ಹಿನ್ನಡೆ ಅನುಭವಿಸಿದ್ದಾರೆ.
ಸದ್ಯ ಪ್ರಧಾನಿ ಮೋದಿ ಅವರು 1,95,502 ಮತಗಳನ್ನು ಪಡೆದರೆ, ಕಾಂಗ್ರೆಸ್‍ನ ಅಜಯ್ ರಾಯ್ 1,34,251 ಮತಗಳನ್ನು ಪಡೆದಿದ್ದಾರೆ. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ ಬಿಜೆಪಿ 35, ಎಸ್‍ಪಿ 34, ಕಾಂಗ್ರೆಸ್ 8, ಆರ್‍ಎಲ್‍ಡಿ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಉತ್ತರಪ್ರದೇಶದಲ್ಲಿ ವಾರಣಾಸಿ, ರಾಯ್ ಬರೇಲಿ, ಅಮೇಥಿ, ಕನ್ನೌಜ್, ಮೈನ್‌ಪುರಿ, ಅಜಮ್‌ಗಢ, ಘಾಜಿಯಾಬಾದ್, ಮೀರತ್, ಫೈಜಾಬಾದ್, ಮಥುರಾ, ಗೌತಮ್ ಬುದ್ಧ ನಗರ, ಕಾನ್ಪುರ, ಗೋರಖ್‌ಪುರ ಗಮನ ಸೆಳೆದಿರುವ ಪ್ರಮುಖ ಕ್ಷೇತ್ರಗಳಾಗಿವೆ.