ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮ್ಯಾಟ್ರಿಮೋನಿಯಲ್ಲಿ ಮಹಿಳೆಯ ಪರಿಚಯ –ಚಿನ್ನಾಭರಣ ದೋಚಿ ಯುವಕ ಪರಾರಿ

Twitter
Facebook
LinkedIn
WhatsApp
shutterstock 1697156779 1

ನವದೆಹಲಿ: ವಿಮಾನಯಾನ ಸಂಸ್ಥೆಯೊಂದರ ಮಹಿಳಾ ಉದ್ಯೋಗಿಯೊಬ್ಬರಿಗೆ 18 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು 65,000 ರೂ. ನಗದನ್ನು ವಂಚಿಸಿ (Cheat) ಪರಾರಿಯಾದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

ವಿಜಯಲಕ್ಷ್ಮೀ ವಂಚನೆಗೊಳಗಾದ ಮಹಿಳೆ. ಇವರು ಬೆಂಗಳೂರಿನ (Bengaluru) ಮೂಲದವರಾಗಿದ್ದು, ಮ್ಯಾಟ್ರಿಮೋನಿ (Matrimony) ಸೈಟ್‌ನಲ್ಲಿ ಪರಿಚಯವಾದ ಅನ್ಶುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗುವ ಸಲುವಾಗಿ ದೆಹಲಿಗೆ ತೆರಳಿದ್ದರು. ಈ ವೇಳೆ ಅವರ ಬಳಿಯಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ಹಣದ ಸಮೇತ ಅನ್ಶುಲ್ ಪರಾರಿಯಾಗಿದ್ದಾನೆ. 

ಅನ್ಶುಲ್ ಜೈನ್ ಮ್ಯಾಟ್ರಿಮೋನಿ ಸೈಟ್‌ನಲ್ಲಿ ವಿಜಯಲಕ್ಷ್ಮೀ ಎಂಬವರನ್ನು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ ವಾಟ್ಸಾಪ್‌ನಲ್ಲಿ ಮಾತನಾಡುತ್ತಾ ತನ್ನನ್ನು ಎನ್‌ಸಿಆರ್‌ನಲ್ಲಿ ಉದ್ಯಮಿ ಎಂದು ಪರಿಚಯಿಸಿಕೊಂಡು ಅವರನ್ನು ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾನೆ. ಮೂರು ದಿನಗಳ ಹಿಂದೆ ಅವರನ್ನು ದೆಹಲಿಗೆ ಬರುವಂತೆ ಒತ್ತಾಯಿಸಿ ಮದುವೆ ಸಮಾರಂಭವೊಂದರಲ್ಲಿ ಅವರನ್ನು ತನ್ನ ಕುಟುಂಬಕ್ಕೆ ಪರಿಚಯಿಸುವುದಾಗಿ ಹೇಳಿದ್ದು, ಅದಕ್ಕೆ ಸೂಕ್ತವಾದ ಒಡವೆಗಳು ಮತ್ತು ಬಟ್ಟೆಯನ್ನು ತರಬೇಕು ಎಂದು ಹೇಳಿದ್ದಾನೆ.

ಮೇ 7ರಂದು ವಿಜಯಲಕ್ಷ್ಮೀ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಅವರನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಹೋಗಿ ಫುಡ್‌ಕೋರ್ಟ್‌ನಲ್ಲಿ ಒಟ್ಟಿಗೆ ತಿಂಡಿ ತಿಂದು ಪ್ರಯಾಣ ಮುಂದುವರೆಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ, ಕಾರಿನಲ್ಲಿ ಏನೋ ಸಮಸ್ಯೆಯಿದೆ ಏನೆಂದು ನೋಡು ಎಂದು ಆಕೆಯನ್ನು ಕಾರಿನಿಂದ ಕೆಳಗಿಳಿಸಿದ್ದಾನೆ. ಆಕೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ 18 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳು, ಮೊಬೈಲ್ ಹಾಗೂ ಆಕೆಯ ಬ್ಯಾಗ್‌ನಲ್ಲಿದ್ದ 15,000 ರೂ. ಹಣದೊಂದಿಗೆ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಆಕೆಯ ಎಟಿಎಂ ಕಾರ್ಡಿನಿಂದ 50,000 ರೂ.ಗಳನ್ನೂ ಡ್ರಾ ಮಾಡಿದ್ದಾನೆ. 

ಘಟನೆ ನಡೆದ ಬಳಿಕ ವಿಜಯಲಕ್ಷ್ಮೀ ಆತನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದು, ಆತನ ಫೋಟೋವನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ. ಈ ಕುರಿತು ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 420/406 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist