ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪಟ್ಟಿ ಪ್ರಕಟ: ಗಣೇಶ ಕೊಲೆಕಾಡಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’

Twitter
Facebook
LinkedIn
WhatsApp
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪಟ್ಟಿ ಪ್ರಕಟ: ಗಣೇಶ ಕೊಲೆಕಾಡಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನ ಪ್ರಕಟ ಮಾಡಲಾಗಿದ್ದು ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಆಯ್ಕೆಗೊಂಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅವರು ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿ, ಪಾರ್ತಿಸುಬ್ಬ ಪ್ರಶಸ್ತಿ’ಯು ₹ 1 ಲಕ್ಷ ನಗದು ಒಳಗೊಂಡಿದೆ ಎಂದು ವಿವರಿಸಿದರು.

2022ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ತೆಂಕುತಿಟ್ಟಿನ ಯಕ್ಷಗಾನ ಭಾಗವತ ಪುತ್ತಿಗೆ ರಘುರಾಮ ಹೊಳ್ಳ(ಮಂಗಳೂರು), ತೆಂಕುತಿಟ್ಟು ಭಾಗವತ ಪಟ್ಲ ಸತೀಶ್ ಶೆಟ್ಟಿ(ಮಂಗಳೂರು), ಮೂಡಲಪಾಯ ಯಕ್ಷಗಾನ ಭಾಗವತ ಹಾಗೂ ಕಲಾವಿದ ಭಾಗವತ ಚಂದಯ್ಯ(ತುಮಕೂರು), ಭಾಗವತ ಹಾಗೂ ಪಾರಂಪರಿಕ ಯಕ್ಷಗಾನ ಕಲಾವಿದ ಭಾಗವತ ಉಮೇಶ ಭಟ್ ಬಾಡ(ಉತ್ತರ ಕನ್ನಡ) ಮತ್ತು ಭಾಗವತ ಹಾಗೂ ಬಡಗುತಿಟ್ಟು ಯಕ್ಷಗಾನ ಕಲಾವಿದ ಕೆ.ಪಿ. ಹೆಗಡೆ(ಉಡುಪಿ) ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ತಲಾ ₹ 50 ಸಾವಿರ ನಗದು ಒಳಗೊಂಡಿದೆ.

‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಯಕ್ಷಗಾನ ಕ್ಷೇತ್ರದ 10 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ‘ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ’ಗೆ ಪಾರಂಪರಿಕ ಯಕ್ಷಗಾನ ಕಲಾವಿದ ಹುಕ್ಕಲಮಕ್ಕಿ ಕಮಲಾಕರ ಹೆಗಡೆ (ಉತ್ತರ ಕನ್ನಡ) ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು ಒಳಗೊಂಡಿವೆ.

2021ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಮಂಗಳೂರಿನ ಪೊಳಲಿ ನಿತ್ಯಾನಂದ ಕಾರಂತ ಅವರ ‘ಯಕ್ಷಗಾನ ಪ್ರಸಂಗ ಸಂಪುಟ’, ಬೆಳಗಾವಿಯ ಎಲ್‌.ಎಸ್. ಶಾಸ್ತ್ರಿ ಅವರ ‘ಯಕ್ಷಗಾನ ನಕ್ಷತ್ರಗಳು’ ಹಾಗೂ ಬೆಂಗಳೂರಿನ ವಿದ್ಯಾರಶ್ಮಿ ಪೆಲತ್ತಡ್ಕ ಅವರ ‘ಯಕ್ಷಗಾನ ಲೀಲಾವಳಿ’ ಕೃತಿಗಳು ಆಯ್ಕೆಯಾಗಿವೆ. ಈ ಬಹುಮಾನವು ತಲಾ ₹ 25 ಸಾವಿರ ನಗದು ಒಳಗೊಂಡಿವೆ.

‘ಪಾರ್ತಿಸುಬ್ಬ ಸೇರಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭವು ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ಉಡುಪಿಯ ಕಮಲಶಿಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಜಿ.ಎಲ್. ಹೆಗಡೆ ತಿಳಿಸಿದರು.

ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆಯಾದವರು

ಹೆಸರು; ಜಿಲ್ಲೆ; ವಿಭಾಗ

  • ಕೋಲ್ಯಾರು ರಾಜು ಶೆಟ್ಟಿ; ಹೊರನಾಡು ಕನ್ನಡಿಗ; ಯಕ್ಷಗಾನ ಕಲಾವಿದ
  • ಕೃಷ್ಣನಾಯ್ಕ ಜಿ. ಬೇಡ್ಕಣಿ; ಉತ್ತರ ಕನ್ನಡ; ಬಡಾಬಡಗು ಯಕ್ಷಗಾನ ಕಲಾವಿದ
  • ಕೃಷ್ಣ ಗಾಣಿಗ ಕೋಡಿ; ಉಡುಪಿ; ಬಡಗತಿಟ್ಟು ಯಕ್ಷಗಾನ ಕಲಾವಿದ
  • ಶುಭಾನಂದ ಶೆಟ್ಟಿ; ಕಾಸರಗೋಡು; ತೆಂಕುತಿಟ್ಟು ಯಕ್ಷಗಾನ ಕಲಾವಿದ
  • ಕವ್ವಾಳೆ ಗಣಪತಿ ಭಾಗವತ; ಉತ್ತರ ಕನ್ನಡ; ಬಡಾಬಡಗು ಯಕ್ಷಗಾನ ಕಲಾವಿದ
  • ಬಾಲಕೃಷ್ಣ ನಾಯಕ್; ಉಡುಪಿ; ಬಡಗುತಿಟ್ಟು ಯಕ್ಷಗಾನ ಪ್ರಸಾಧನ ಕಲಾವಿದ
  • ಎಸ್‌.ಪಿ. ಅಪ್ಪಯ್ಯ; ಬೆಂಗಳೂರು; ಮೂಡಲಾಪಯ ಯಕ್ಷಗಾನ ಕಲಾವಿದ
  • ಕೊಲ್ಲೂರು ಕೊಗ್ಗ ಆಚಾರ್ಯ; ಉಡುಪಿ; ಬಡಗುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದ
  • ಡಿ. ಭೀಮಯ್ಯ; ತುಮಕೂರು; ಮೂಡಲಾಪಯ ಯಕ್ಷಗಾನ ಕಲಾವಿದ
  • ಅಜಿತ್ ಕುಮಾರ್ ಜೈನ್; ಉಡುಪಿ; ತೆಂಕುತಿಟ್ಟು ಯಕ್ಷಗಾನ ಕಲಾವಿದ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ