ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

Twitter
Facebook
LinkedIn
WhatsApp
rani abbakka 96225570 2

ಉಡುಪಿ: ರಾಜ್ಯೋತ್ಸವ, ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಸಾಹಿತಿ ಅಂಬಾತಯ ಮುದ್ರಾಡಿ (Amba Tanaya Mudradi) ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿಯವರಾದ ಇವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ (Yakshagana), ನಾಟಕ, ಸಾಹಿತ್ಯ ಹೀಗೆ ಹಲವು ಆಯಾಮಗಳಲ್ಲಿ ಖ್ಯಾತರಾಗಿದ್ದರು.

ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88) ಮಂಗಳವಾರ ಮುಂಜಾನೆ ಅಗಲಿದ್ದಾರೆ. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ್ದ ಅವರು, ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿದ್ದರು. ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ ಎಂದು ಅವರ ಹಿತೈಶಿಗಳ ಮನದಾಳದ ಮಾತು.

ಕಳೆದ ವಾರ ಉಡುಪಿಯಲ್ಲಿ (Udupi) ನಡೆದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು, ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ ಪುಸ್ತಕವನ್ನು ಪ್ರಕಟಿಸಲಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಂಬಾತನಯರು ಅಗಲಿದ್ದಾರೆ. 

ಯಕ್ಷಗಾನ ಕಲಾರಂಗವು ಅವರನ್ನು ಗೌರವಿಸಿದ್ದು, ಸಂಸ್ಥೆಗೆ ಸದಾ ಮಾರ್ಗದರ್ಶನ ನೀಡುತ್ತಾ ಬಂದ ಅಂಬಾತನಯರ ಅಗಲುವಿಕೆಗೆ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಳಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಖ್ಯಾತ ಸಾಹಿತಿ, ಕವಿ, ಹರಿದಾಸ, ತಾಳಮದ್ದಳೆ ಅರ್ಥದಾರಿ, ಕನ್ನಡ ನಾಡು ನುಡಿ ಜನಪದದ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರೇಷ್ಠ ಕೊಡುಗೆ ನೀಡಿದ, ಕನ್ನಡ ಸಾಹಿತ್ಯಲೋಕದ ಮರೆಯಲಾಗದ ರತ್ನ, ಕನ್ನಡ ಕನ್ಮಣಿ ಅಜಾತಶತ್ರು ಅಂಬಾತನಯ ಮುದ್ರಾಡಿಯವರು ಇಂದು ಅಗಲಿದ್ದಾರೆ. ಅವರ ಬದುಕಿನ ಆದರ್ಶ, ಕ್ರಿಯಾಶೀಲತೆ ಎಲ್ಲರ ಬದುಕಿನಲ್ಲಿ ಸ್ಫೂರ್ತಿ ನೀಡಲಿ ಎಂದು ಉಡುಪಿಯ ಕಲಾ ಪೋಷಕ ಸುಬ್ರಹ್ಮಣ್ಯ ಬಾಸ್ರಿ ಕೆ ಎಸ್ ಶ್ರದ್ಧಾಂಜಲಿ ಸಲ್ಲಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ