ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಗಾದಿ ಹಬ್ಬಕ್ಕೆ ಸೀರೆ ಹಂಚಲು ಬಂದ ಬಿಜೆಪಿ ಕಾರ್ಯಕರ್ತರು- ಬೆಂಕಿ ಹಚ್ಚಿ ಮತದಾರರಿಂದ ಕ್ಲಾಸ್

Twitter
Facebook
LinkedIn
WhatsApp
19803fdfa6c53d4bf6b9201c129 4

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿಟಿ ರವಿ (CT Ravi) ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿ ಭಾಗದಲ್ಲಿ ಸೀರೆ ಹಂಚಿದ್ದಾರೆ. ಸೀರೆ ಹಂಚುವ ವೇಳೆ ಮನೆಗೆ ಬಂದ ಮದ್ಯವ್ಯಸನಿಯೊಬ್ಬ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ. ರಸ್ತೆ ಮಧ್ಯೆ ಸೀರೆಯನ್ನು ಸುಟ್ಟು ಸೀರೆ ಹಂಚಲು ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಅಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾನೆ.

ಕೊರೊನಾ ಸಂದರ್ಭದಲ್ಲಿ ಒಂದು ಕೆಜಿ ಅಕ್ಕಿ ಕೊಟ್ಟಿಲ್ಲ. ಈಗ ಎಲೆಕ್ಷನ್ ಬಂತು ಅಂತ ಸೀರೆ ಹಂಚಲು ಬಂದಿದ್ದಾರಾ ಎಂದು ಹಳ್ಳಿಗರು ರೆಬೆಲ್ ಆಗಿದ್ದಾರೆ. ನಮಗೆ ಸೀರೆ ಬೇಡ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಮಗೆ ಸೂಕ್ತವಾದ ಮೂಲಭೂತ ಸೌಲಭ್ಯ ಬೇಕು ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ವ್ಯಕ್ತಿ 2-3 ಸೀರೆಗಳನ್ನು ರಸ್ತೆಗೆ ಎಸೆದು ಬೆಂಕಿ ಹಚ್ಚಿದ್ದಾನೆ. ಇದನ್ನು ಕಂಡ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ