ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
Twitter
Facebook
LinkedIn
WhatsApp
ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಘಟನೆ ನಡೆದಿದೆ.
ಪವಾಡ ಬಸವೇಶ್ವರ ಜಾತ್ರೆ ಅಂಗವಾಗಿ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ರಥೋತ್ಸವ ನಡೆಯುತ್ತಿದ್ದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ಬಸವರಾಜ್ ಸಾವಿಗೀಡಾಗಿದ್ದಾನೆ.
ಬಸವರಾಜ್‍ಗೆ ಗಂಭೀರ ಗಾಯಗಳಾಗಿದ್ದವು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಬಸವರಾಜ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದ್ದಾನೆ.
ಬಸವರಾಜ್ ಎರಡೂ ಕಾಲುಗಳ ಮೇಲೆ ರಥದ ಕಲ್ಲಿನ ಚಕ್ರಗಳು ಹಾದಿದ್ದವು. ಕಾರಣ ತೀವ್ರವಾಗಿ ಬಸವರಾಜ್ ಗಾಯಗೊಂಡಿದ್ದ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.