ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಮ್ಯಾ ಎಲ್ಲರಿಗೂ ಇಷ್ಟ ಆಗೋದೇಕೆ? ಕನ್ನಡದಲ್ಲೇ ಪತ್ರ ಬರೆದು ವಿವರಿಸಿದ ಪೂಜಾ ಗಾಂಧಿ

Twitter
Facebook
LinkedIn
WhatsApp
crime 2 1

ಪೂಜಾ ಗಾಂಧಿ (Pooja Gandhi) ಅವರು ಸದ್ಯ ನಟನೆಯಿಂದ ದೂರ ಇದ್ದಾರೆ. ಅವರು ಸದ್ಯ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗ ಪೂಜಾ ಗಾಂಧಿ ಅವರು ರಮ್ಯಾ ಬಗ್ಗೆ ಬರೆದುಕೊಂಡಿದ್ದಾರೆ. ‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ಗೆ ರಮ್ಯಾ ಅತಿಥಿಯಾಗಿ ಬರುತ್ತಿದ್ದಾರೆ. ಈ ಕಾರಣಕ್ಕೆ ರಮ್ಯಾ (Ramya) ಬಗ್ಗೆ ಪೂಜಾ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರು ಕನ್ನಡದಲ್ಲೇ ಪತ್ರ ಬರೆದಿದ್ದಾರೆ ಅನ್ನೋದು ವಿಶೇಷ. ಸದ್ಯ ಈ ಪತ್ರ ವೈರಲ್ ಆಗುತ್ತಿದೆ. ಪೂಜಾ ಗಾಂಧಿ ಕೂಡ ಕಾರ್ಯಕ್ರಮಕ್ಕೆ ಬರ್ತಾರಾ ಅನ್ನೋದು ಕಾದುನೋಡಬೇಕಿದೆ.

‘ರಮೇಶ್ ಸರ್, ನಿಮ್ಮ ಮತ್ತು ರಮ್ಯ ಮಧ್ಯೆ ನಡೆಯುವ ಮಾತಿನ ಜುಗಲ್​ಬಂದಿ ನೋಡೋಕ್ಕೆ ಲಕ್ಷಾಂತರ ಕನ್ನಡಿಗರ ರೀತಿ ನಾನೂ ಕೂಡ ಕಾತರದಿಂದ ಕಾಯುತ್ತಿದ್ದೇನೆ. ರಮ್ಯಾ ಒಳ್ಳೆಯ ವ್ಯಕ್ತಿ. ಅವರಿಗೆ ಏನು ಅನಿಸುತ್ತದೆಯೋ ಅದನ್ನೇ ಹೇಳುತ್ತಾರೆ’ ಎಂದು ಪತ್ರ ಆರಂಭ ಮಾಡಿದ್ದಾರೆ ಪೂಜಾ ಗಾಂಧಿ.

https://www.facebook.com/photo.php?fbid=2074188029444734&set=a.104686656394891&type=3

‘ನನ್ನ ವೈಯಕ್ತಿಕವಾಗಿ ರಮ್ಯಾ ಯಾಕೆ ಇಷ್ಟ ಆಗ್ತಾರೆ ಅಂದ್ರೆ, ಅವರು ತಮ್ಮಸಹ ಕಲಾವಿದರ ಪರವಾಗಿ ನಿಲ್ಲುತ್ತಾರೆ. ಅವರಲ್ಲಿನ ಈ ಗುಣ ಇಷ್ಟಾಗುತ್ತದೆ. ನನಗೆ ಈಗಲೂ ನೆನಪಿದೆ. ರಾಯಚೂರಿನ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಾಗ, ‘ಪೂಜಾ ಒಳ್ಳೆಯ ಪ್ರಯತ್ನ ಮಾಡಿದ್ದೀರಿ’ ಎಂದು ರಮ್ಯಾ ಹೇಳಿದ್ದರು. ರಮ್ಯಾ ನಿಮ್ಮ ಪ್ರೊಡಕ್ಷನ್ ಕಂಪನಿಗೆ ಶುಭಾವಾಗಲಿ. ನಿಮ್ಮ ಸಂಸ್ಥೆಯಿಂದ ರಾಷ್ಟ್ರಮಟ್ಟದ ಕನ್ನಡ ಸಿನಿಮಾಗಳು ಮೂಡಿಬರಲಿ’ ಎಂದು ಅವರು ಶುಭಹಾರೈಸಿದ್ದಾರೆ.

May be a closeup of 1 person and standing

ರಮ್ಯಾ ಅವರ ವೃತ್ತಿ ಜೀವನದಲ್ಲಿ ರಾಜ್​ಕುಮಾರ್ ಕುಟುಂಬ ವಿಶೇಷವಾಗಿದೆ. ರಮ್ಯಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪಾರ್ವತಮ್ಮ. ಅವರಿಗೆ ರಮ್ಯಾ ಎಂದು ನಾಮಕರಣ ಮಾಡಿದ್ದೂ ಅವರೇ. ಇದನ್ನು ರಮ್ಯಾ ಉಲ್ಲೇಖ ಮಾಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಅಭಿನಯದ ‘ಸಂಜು ಮತ್ತು ಗೀತ’ ಸಿನಿಮಾ ಯಶಸ್ಸು ಕಂಡಿತ್ತು. ಶ್ರೀನಗರ ಕಿಟ್ಟಿ ಕೂಡ ವೇದಿಕೆ ಏರಿದ್ದಾರೆ. ಈ ವೇಳೆ ‘ಐ ಲವ್ ಯೂ ಸಂಜು’ ಎಂದಿದ್ದಾರೆ ರಮ್ಯಾ. ಪುನೀತ್ ಹಾಗೂ ರಮ್ಯಾ ಅವರದ್ದು ಹಿಟ್ ಕಾಂಬಿನೇಷನ್. ಆ ಬಗ್ಗೆಯೂ ರಮ್ಯಾ ಮಾತನಾಡಿದ್ದಾರೆ. ರಮ್ಯಾ ಪುನೀತ್ ನೆನೆದು ಕಣ್ಣೀರು ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist