ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Twitter
Facebook
LinkedIn
WhatsApp
ms 250123 erod

ಈರೋಡ್ , ಜ 25: ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್’ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ನ್ನು ಪೈಲೆಟ್ ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಗುರೂಜಿ ಜೊತೆ ಇಬ್ಬರು ಆಪ್ತ ಸಹಾಯಕರು ಮತ್ತು ಒಬ್ಬ ಪೈಲಟ್ ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಕಡಂಬೂರಿಗೆ 10.15ರ ವೇಳೆಗೆ ಹಾರಾಟ ಆರಂಭಿಸಿದ್ದರು.

ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಕುಗ್ರಾಮವಾದ ಉಕಿನಿಯಂನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಕಡಂಬೂರು ಪೊಲೀಸ್ ಇನ್ಸ್‌ಪೆಕ್ಟರ್‌ ಸಿ.ವಡಿವೇಲ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ