ರಾಜಕೀಯಕ್ಕೆ ನಿವೃತ್ತಿ ,ಚುನಾವಣಾ ಪ್ರಚಾರಕ್ಕೂ ಹೋಗುವುದಿಲ್ಲ ;ಬೇಸರ ವ್ಯಕ್ತಪಡಿಸಿದ ಅಂಗಾರ
Twitter
Facebook
LinkedIn
WhatsApp

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬೇಸರಗೊಂಡು ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.
ಟಿಕೆಟ್ ಕೈತಪ್ಪಿದ ಬಗ್ಗೆ ಮಾತನಾಡಿದ ಅಂಗಾರ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ.ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.
ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ.ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ.ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರ, ನಾನು ಇನ್ನು ರಾಜಕಾರಣದಲ್ಲಿಲ್ಲ.ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬೇಕು ಎಂದು ಹೇಳಿದರು.
6 ಬಾರಿ ಶಾಸಕರಾಗಿರುವ ಅಂಗಾರ ಈ ಬಾರಿ ಸಚಿವರಾಗಿ ಅಧಿಕಾರವನ್ನು ಪಡೆದಿದ್ದರು.ಇದೀಗ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯಕ್ಕೆ ನಿವೃತಿ ಘೋಷಿಸಿಕೊಂಡಿದ್ದಾರೆ.