ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು ಈಗ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸಂಪುಟ ವಿಸ್ತರಣೆ ಸಂಬಂಧ ರೇಣುಕಾಚಾರ್ಯ ಅವರು ಹಲವು ಬಾರಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಬಜೆಟ್ ಅಧಿವೇಶನ ಮುಗಿದ ಬಳಿಕ ಮತ್ತೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಯ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ರೇಣುಕಾಚಾರ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ವಿಧಾನಸೌಧದ ಪಶ್ಚಿಮ ದ್ವಾರದಿಂದ ಡಿಕೆಶಿ ಮತ್ತು ರೇಣುಕಾಚಾರ್ಯ ಏಕಕಾಲಕ್ಕೆ ಹೊರ ಬಂದು ಎದುರು ಬದುರಾದರು. ಈ ವೇಳೆ ಡಿಕೆಶಿಯವರು, ‘ಏನ್ರೀ.. ರೇಣುಕಾಚಾರ್ಯ ಮಂತ್ರಿ ಆಗಲ್ವೇನ್ರೀ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರವಾಗಿ “ಅಯ್ಯೋ ಬಿಡಿ, ಆಗೋಣ”ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಇದಾದ ಬಳಿಕ ಇಬ್ಬರೂ ಪಶ್ಚಿಮ ದ್ವಾರದ ಮೂಲೆಗೆ ಹೋಗಿ, ಸುಮಾರು ಐದು ನಿಮಿಷ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.
ಬಳಿಕ ಈ ಮಾತುಕತೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ರಾಜಕಾರಣ ಬೇರೆ, ವೈಯಕ್ತಿಕ ಸಂಬಂಧಗಳು ಬೇರೆ. ಡಿಕೆಶಿಯವರು ನನ್ನ ಆತ್ಮೀಯ ಗೆಳೆಯರು. ಆಗಾಗ ಇಬ್ಬರೂ ಭೇಟಿಯಾಗುತ್ತೇವೆ. ಇಂತಹ ಭೇಟಿಗಳನ್ನು ರಾಜಕೀಯ ಆಯಾಮದಿಂದ ನೋಡುವುದು ಸರಿಯಲ್ಲ ಎಂದಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist