ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಕುಮಾರ್ ಟಾಕಳೆ ನನ್ನ ಗಂಡ, ಅವನು ಏನು ಮೋಸ ಮಾಡಿದ್ದಾನೆ ಎಂದು ಹೇಳುತ್ತೇನೆ: ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ

Twitter
Facebook
LinkedIn
WhatsApp
ರಾಜಕುಮಾರ್ ಟಾಕಳೆ ನನ್ನ ಗಂಡ, ಅವನು ಏನು ಮೋಸ ಮಾಡಿದ್ದಾನೆ ಎಂದು ಹೇಳುತ್ತೇನೆ: ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ

ಬೆಳಗಾವಿ: ಯುವ ಕಾಂಗ್ರೆಸ್ ನಾಯಕಿ ಎಂದು ಗುರುತಿಸಿಕೊಂಡಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂಬ ಸುದ್ದಿಯಾಗುತ್ತಲೇ ಇಂದು ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿ ನವ್ಯಶ್ರೀ ಸ್ಫೋಟಕ ಹೇಳಿಕೆ ನೀಡಿದ್ದಾರೆ. 
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ನಿನ್ನೆ ತಡರಾತ್ರಿ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ. ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 

ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ, ಸುಳ್ಳು ಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ರಾಜಕುಮಾರ್ ದೂರು ನೀಡಿದ್ದಾರೆ.
ನನಗೆ ರಾಜಕುಮಾರ್ ಜೊತೆ ಮದುವೆಯಾಗಿದೆ: ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ನವ್ಯಶ್ರೀ, ನಾನು ಕಳೆದ 15 ದಿನಗಳಿಂದ ಭಾರತದಲ್ಲಿ ಇರಲಿಲ್ಲ, ವಿದೇಶಕ್ಕೆ ಹೋಗಿದ್ದೆ, ನಿನ್ನೆಯಷ್ಟೇ ವಾಪಸ್ ಬಂದಿದ್ದೇನೆ. ನನ್ನ ಕೆಲವು ಖಾಸಗಿ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ದುರ್ಬಳಕೆಯಾಗಿದೆ ಎಂದು ಗೊತ್ತಾಗಿದೆ. ಈಗ ನಾನು ಪೊಲೀಸ್ ಆಯುಕ್ತರನ್ನು ಭೇಟಿಯಾಗಲು ಹೋಗುತ್ತಿದ್ದೇನೆ. ಈ ಪ್ರಕರಣದ ತನಿಖೆಯಾಗಬೇಕು. ನನ್ನ ಬಗ್ಗೆ ದಾಖಲಾಗಿರುವ ಎಫ್ಐಆರ್ ಬಗ್ಗೆ ನನಗೆ ಗೊತ್ತಿಲ್ಲ, ನನ್ನನ್ನು ಇದುವರೆಗೆ ಪೊಲೀಸರು ಸಂಪರ್ಕಿಸಿಲ್ಲ ಎಂದರು.
ಎಲ್ಲರೂ ರಾಜಕುಮಾರ್ ಟಾಕಳೆ ಯಾರು ಎಂದು ಕೇಳುತ್ತಿದ್ದಾರೆ. ಅವನು ನನ್ನ ಗಂಡ, ಅವನು ನನಗೆ ಏನು ಮೋಸ ಮಾಡಿದ್ದಾನೆ ಎಂದು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಇಡೀ ರಾಜ್ಯದಲ್ಲಿ ನನ್ನ ಮೇಲೆ ಹನಿ ಟ್ರ್ಯಾಪ್ ಸೇರಿದಂತೆ ಯಾವುದೇ ಕೇಸು, ಆರೋಪಗಳಿಲ್ಲ, ನಾನೊಬ್ಬ ಕ್ಲೀನ್ ಇಮೇಜ್ ಹೆಣ್ಣುಮಗಳು. 8 ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ. ರಾಜಕೀಯದಲ್ಲಿ ನಾನು ಬೆಳೆಯುತ್ತೇನೆ ಎಂದು ಕುತಂತ್ರದಿಂದ ಈ ರೀತಿ ಮಾಡುತ್ತಿದ್ದಾರೆ. ಇಂದು ನಾನು ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡುತ್ತಿದ್ದೇನೆ, ನನಗೆ ಸ್ವಲ್ಪ ಸಮಯ ಕೊಡಿ, ಸಾಕ್ಷಿ ಸಮೇತ ಪತ್ರಿಕಾಗೋಷ್ಠಿ ಮೂಲಕ ಎಲ್ಲಾ ಹೇಳುತ್ತೇನೆ ಎಂದರು.
ರಾಜಕುಮಾರ ಟಾಕಳೆ ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರ ಬಳಿ ವಿಶೇಷ ಕರ್ತವ್ಯಾಧಿಕಾರಿಯೂ ಕೆಲಸ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ