ರಾಜಸ್ಥಾನದಲ್ಲಿ ವಿಮಾನ ಪತನ-ಇಬ್ಬರು ಸಿಲುಕಿರುವ ಶಂಕೆ
Twitter
Facebook
LinkedIn
WhatsApp
ರಾಜಸ್ತಾನ, ಜ 28 : ರಾಜಸ್ಥಾನದ ಭರತ್‌ಪುರದಲ್ಲಿ ವಿಮಾನವೊಂದು ಪತನಗೊಂಡಿದೆ. ಆದರೆ ಇದು ಯುದ್ದ ವಿಮಾನವೇ ಅಥವಾ ಸಾಮಾನ್ಯ ವಿಮಾನವೇ ಎಂಬುದು ತಿಳಿದು ಬಂದಿಲ್ಲ.
ಉಚ್ಚೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಯಲಿನಲ್ಲಿ ಬೆಳಗ್ಗೆ 10.15ರ ಸುಮಾರಿಗೆ ವಿಮಾನ ಪತನಗೊಂಡಿದೆ. ವಿಮಾನದೊಳಗೆ ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇದು ಯುದ್ದ ವಿಮಾನವೇ ಅಥವಾ ಸಾಮಾನ್ಯ ವಿಮಾನವೇ ಎಂಬುದು ಸ್ಪಷ್ಟಗೊಂಡಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ಯಾಮ್ ಸಿಂಗ್ ತಿಳಿಸಿದ್ದಾರೆ.
ವಿಮಾನ ಪತನಗೊಂಡ ಕೂಡಲೇ ಬೆಂಕಿ ಹತ್ತಿಕೊಂಡಿದ್ದು, ಸ್ಪೋಟದ ಶಬ್ದ ಕೇಳಿ ಗ್ರಾಮಸ್ಥರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲೇ ವಿಮಾನ ಸುಟ್ಟು ಬೂದಿಯಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.