ಜೈಪುರ: ರಾಜಸ್ಥಾನ ಹೈಕೋರ್ಟ್ ನಲ್ಲಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ದಂಪತಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿದ್ದಾರೆ. ನ್ಯಾಯಮೂರ್ತಿ ಮಹೇಂದ್ರ ಗೋಯಲ್ ಅವರು ಈಗಾಗಲೇ ಆ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ನ್ಯಾಯಮೂರ್ತಿ ಸುಭಾಷ್ ಮೆಹ್ತಾ ಕೂಡ ಅದೇ ಹೈಕೋರ್ಟ್ಗೆ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ. ಇಬ್ಬರೂ ದಂಪತಿಗಳು.
ಶುಭಾ ಮೆಹ್ತಾ ಮತ್ತು ಕುಲದೀಪ್ ಮಥುರ್ ಅವರನ್ನು ರಾಜಸ್ಥಾನ ಹೈಕೋರ್ಟ್ ಗೆ ನ್ಯಾಯಮೂರ್ತಿಗಳಾಗಿ ಜೂ. 3ರಂದು ನೇಮಕ ಮಾಡಲಾಗಿದೆ.
ಶುಭಾ ಅವರ ಪತಿ ಮಹೇಂದ್ರ ಗೋಯಲ್ ಈಗಾಗಲೇ ರಾಜಸ್ಥಾನ ಹೈಕೋರ್ಟ್ನ ನ್ಯಾಯ ಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನೂತನ ನೇಮಕಾತಿಯಿಂದಾಗಿ ರಾಜಸ್ಥಾನ ಹೈಕೋರ್ಟ್ ನ ನ್ಯಾಯಮೂರ್ತಿಗಳ ಸಂಖ್ಯೆ 27ಕ್ಕೆ ಏರಿದೆ.
ಈ ಹಿಂದೆ 2020ರಲ್ಲಿ ನ್ಯಾಯ ಮೂರ್ತಿ ದಂಪತಿಯಾದ ಮುರುಳಿ ಶಂಕರ್ ಕುಪ್ಪರಾಜು ಮತ್ತು ತಮಿಳೆÕಲ್ವಿ ವಲಯಪಾಳ್ಯಮಂದ್ ಒಂದೇ ದಿನದಂದು ಮದ್ರಾಸ್ ಹೈಕೋರ್ಟ್ನ ನ್ಯಾಯ ಮೂರ್ತಿಗಳಾಗಿ ಪ್ರಮಾಣ ಸ್ವೀಕರಿಸಿದ್ದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?