ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಬಹುತೇಕ ಅನ್​ಲಾಕ್ ಮಾಡಿ ಹೊಸ ಮಾರ್ಗಸೂಚಿ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.

Twitter
Facebook
LinkedIn
WhatsApp
ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ.
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.


ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಾಲ್ ತೆರೆಯಲು ಅವಕಾಶ ನೀಡಲಾಗಿದೆ.

ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

ಪಬ್ ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು