ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 16 ರವರೆಗೆ ವ್ಯಾಪಕ ಮಳೆಯ ಮುನ್ಸೂಚನೆ - ಹವಾಮಾನ ಇಲಾಖೆ

Twitter
Facebook
LinkedIn
WhatsApp
rain 85684027

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಕದ್ರಾ, ಸುಳ್ಯ, ಕ್ಯಾಸಲ್​ರಾಕ್, ಮಾಣಿ, ಧರ್ಮಸ್ಥಳ, ಪಣಂಬೂರು, ಕೋಟ, ಉಡುಪಿ, ಗೇರುಸೊಪ್ಪ, ಪುತ್ತೂರು, ಭಾಗಮಂಡಲ, ಉಪ್ಪಿನಂಗಡಿ, ಬೆಳ್ತಂಗಡಿ, ಮಂಗಳೂರು, ಕಾರ್ಕಳ, ಕುಂದಾಪುರ, ಅಂಕೋಲಾ, ಶಿರಾಲಿ, ಸುಬ್ರಹ್ಮಣ್ಯ, ಕಾರವಾರ, ಯಲ್ಲಾಪುರ, ಗೋಕರ್ಣ, ಕುಮಟಾ, ಸಿದ್ದಾಪುರ, ಶೃಂಗೇರಿ, ಸೋಮವಾರಪೇಟೆ, ಮಂಚಿಕೆರೆ, ಬನವಾಸಿ, ಕೊಲ್ಲೂರು, ನಾಪೋಕ್ಲು, ಕೊಟ್ಟಿಗೆಹಾರ, ಹಳಿಯಾಳ, ಗಬ್ಬೂರು, ಬಾಳೆಹೊನ್ನೂರು, ಕಳಸ, ಕಮ್ಮರಡಿ, ಕಿರವತ್ತಿ, ಗಂಗಾವತಿ, ಹುಬ್ಬಳ್ಳಿ, ಕೂಡಲಸಂಗಮ, ಲಿಂಗಸುಗೂರು, ತ್ಯಾಗರ್ತಿ, ಹುಂಚದಕಟ್ಟೆ, ಭದ್ರಾವತಿ, ಹಾರಂಗಿ, ಗೋಣಿಕೊಪ್ಪಲು, ಕೊಪ್ಪ, ಚಿಕ್ಕಬಳ್ಳಾಪುರ, ಅರಕಲಗೂಡು, ತುಮಕೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

ನವದೆಹಲಿ: ಉತ್ತರ ಭಾರತದಲ್ಲಿರುವ (North India) ಹಿಮಾಚಲಪ್ರದೇಶ, ಉತ್ತರಾಖಂಡ್, ಜಮ್ಮುಕಾಶ್ಮೀರ, ಪಂಜಾಬ್, ಹರ್ಯಾಣ ರಾಜ್ಯಗಳು ಕುಂಭದ್ರೋಣ ಮಳೆಗೆ (Heavy Rainfall) ತತ್ತರಿಸಿವೆ. ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.

ಇಂದೂ ದೆಹಲಿ, ಹರ್ಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರವಾಹ, ಭೂಕುಸಿತ ಸಾಮಾನ್ಯ ಎಂಬಂತಾಗಿದ್ದು ಹಿಮಾಚಲದಲ್ಲಂತೂ (Himachal Pradesh) ಅಲ್ಲೋಲಕಲ್ಲೋಲವಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟ ಮೀರಿದ್ದು, ಸಿಕ್ಕಿದ್ದನ್ನೆಲ್ಲಾ ಆಪೋಷನ ಪಡೆಯುತ್ತಿವೆ.

ಬೀಯಾಸ್ ನದಿ (Beas River) ರಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿದೆ. ಕುಲು ಬಳಿ ಕಾರುಗಳು ಕೊಚ್ಚಿ ಹೋಗಿದ್ದು, ಶಿಮ್ಲಾದ ಡಿಂಗು ಮಾತೆಯ ಮಂದಿರದ ರಸ್ತೆ ನೋಡನೋಡುತ್ತಲೇ ಕುಸಿದುಬಿದ್ದಿದೆ. ಅಟಲ್ ಸುರಂಗದ (Atal Tunnel) ಬಳಿಯೇ ಗುಡ್ಡ ಕುಸಿತವಾಗಿದ್ದು ಕುಲು-ಮನಾಲಿ ನಡುವಿನ ರಸ್ತೆ ಬಂದ್ ಆಗಿದೆ.

ಪಂಧೋ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನೀರು ಹೊರಗೆ ಬಿಡಲಾಗಿದ್ದು, ಸಣ್ಣ ಸೇತುವೆಯೊಂದು ಮಾಯವಾಗಿದೆ. ಪಂಚವಕ್ತ್ರ ಎಂಬಲ್ಲಿ ಮರದ ದಿಮ್ಮಿಗಳ ಸಮೇತ ಜಲರಕ್ಕಸ ನಗರಕ್ಕೆ ನುಗ್ಗಿದೆ. ನಿರಂತರ ಗುಡ್ಡ ಕುಸಿತದ ಪರಿಣಾಮ ಮಾರ್ಗಮಧ್ಯೆಯೇ ಸಾವಿರಾರು ವಾಹನ ಸಿಲುಕಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ