ರಾಜ್ಯದ ಕೆಲ ಜಿಲ್ಲೆಗಳಲ್ಲಿ ಆಗಸ್ಟ್ 14 ರ ವರೆಗೆ ಮಳೆ ಸಾಧ್ಯತೆ!
ಕರ್ನಾಟಕದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು ಮತ್ತೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಕ್ಯಾಸಲ್ ರಾಕ್, ಕದ್ರಾ, ಸಿದ್ದಾಪುರ, ಶಿರಾಲಿ, ಲೋಂಡಾ, ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ, ಮುನಿರಾಬಾದ್, ಶಿಡ್ಲಘಟ್ಟ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ.ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದೇಶಾದ್ಯಂತ ಮುಂಗಾರು ವ್ಯಾಪಿಸಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಭಾರತದ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಆಗಸ್ಟ್ 9 ರಂದು ಅತಿಯಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ
ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ ವ್ಯಾಪ್ತಿಯ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಉತ್ತರಾಖಂಡದ ಬಹುತೇಕ ಕಡೆಗಳಲ್ಲಿ ಆಗಸ್ಟ್ 10ರ ವರೆಗೆ ಭಾರೀ ಮಳೆ ಸುರಿಯಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.