ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!

Twitter
Facebook
LinkedIn
WhatsApp
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 41.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ