ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಸಿರಿಧಾನ್ಯ ಯೋಜನೆಗೆ ಕೇಂದ್ರದ ಶಹಬ್ಬಾಸ್‌: ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮೆಚ್ಚುಗೆ

Twitter
Facebook
LinkedIn
WhatsApp
PM Modi 1 1

ಬೆಂಗಳೂರು (ಜ.23): ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಸಿರಿ ಯೋಜನೆಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ‘ಸಿರಿಧಾನ್ಯ ಹಾಗೂ ಸಾವಯವ; ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2023’ರ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ರೈತ ಸಿರಿ ಯೋಜನೆ ಮೂಲಕ ಸಿರಿಧಾನ್ಯ ಬೆಳೆಯುವ ರೈತರಿಗೆ ಆರ್ಥಿಕ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿದೆ. ಸ್ವಾಸ್ಥ್ಯ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿ ಆಗಲಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷದ ಭಾಗವಾಗಿ ಕರ್ನಾಟಕ ಸರ್ಕಾರ ಆಯೋಜಿಸಿದ ಸಿರಿಧಾನ್ಯ ಮೇಳದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅಲ್ಲದೇ ಕರ್ನಾಟಕ ಕೃಷಿ ಇಲಾಖೆ ಸಿರಿಧಾನ್ಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿರುವುದಕ್ಕೆ ಅಭಿನಂದಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರೈತ ಶಕ್ತಿ ಯೋಜನೆ ಮೂಲಕ ಪ್ರತಿ ಒಂದು ಎಕರೆಗೆ 250 ರು. ಡೀಸೆಲ್‌ಗೆ ಸಹಾಯಧನ ನೀಡಲಾಗುತ್ತಿದೆ. ಇದು ದೇಶದಲ್ಲಿಯೇ ಮೊದಲು ಎಂದರು.

202 ಕೋಟಿ ರು. ಒಡಂಬಡಿಕೆ: ಸಿರಿಧಾನ್ಯ ಮೇಳದಲ್ಲಿ ಒಟ್ಟು 139 ವ್ಯಾಪಾರ ವಹಿವಾಟು ಸಭೆ ನಡೆದಿದ್ದು, ಪರಸ್ಪರ 201.91 ಕೋಟಿ ರು. ಮೊತ್ತ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಸಭೆಯಲ್ಲಿ 68 ಮಾರುಕಟ್ಟೆದಾರರು, 59 ಉತ್ಪಾದಕರು ಭಾಗವಹಿಸಿದ್ದರು ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 ಲಕ್ಷ ಮಂದಿ ಭೇಟಿ: ಮೂರು ದಿನಗಳ ಕಾಲ ನಡೆದ ಸಿರಿಧಾನ್ಯ ಮೇಳದಲ್ಲಿ 250ಕ್ಕೂ ಅಧಿಕ ರೈತರು, ಸಂಘ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಿದ್ದಾರೆ. 2 ಲಕ್ಷಕ್ಕೂ ಅಧಿಕ ಮಂದಿ ಸಿರಿಧಾನ್ಯ ಮೇಳಕ್ಕೆ ಭೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ