ರಾಜ್ಯದ ಹಲವೆಡೆ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ
ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾ 14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆ ಹಾಗೂ ಮಾ.16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ 16 ರಿಂದ ಮಾ 18 ರವೆರೆಗೆ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ 17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕಾರವಾರದಲ್ಲಿ ಸೋಮವಾರ ಗರಿಷ್ಟ 371 ಡಿ.ಸೆ ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ 14 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ದಾಖಲಾಗಿದೆ.ಬೆಂಗಳೂರು ನಗರ ಅಥವಾ ಬೆಂಗಳೂರು ಗ್ರಾಮಾಂತರದಲ್ಲಿ 16, 17 ನೇ ತಾರೀಕಿನಂದು ಹಗುರ ಮಳೆ ಅಥವಾ ಸಾಧಾರಣದಿಂದ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. ಉಳಿದಂತೆ ಗರಿಷ್ಠ ಉಷ್ಣಾಂಶ 32 ಅಥವಾ ಕನಿಷ್ಠ ಉಷ್ಟಾಂಶ 18 ಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇರುತ್ತದೆ.
ಕಳೆದ 24 ಗಂಟೆ ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಅತ್ಯಂತ ಗರಿಷ್ಠ ಉಷ್ಣಾಂಶ ಕಾರವಾರದಲ್ಲಿ 371 ಡಿಗ್ರಿ ಅತಿ ಕಡಿಮೆ ಉಷ್ಣಾಂಶ ಬಾಗಲಕೋಟೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಸಾಮಾನ್ಯ ಉಷ್ಣಾಂಶಕ್ಕಿಂತ ಕರಾವಳಿಯಲ್ಲಿ 3 ಡಿಗ್ರಿ ಹೆಚ್ಚಳ ಉತ್ತರ ಒಳನಾಡಿನಲ್ಲಿ 2-3 ಡಿಗ್ರಿ ಕಡಿಮೆ ಉಷ್ಣಾಂಶ ಪತ್ತೆಯಾಗಿತ್ತುಕರಾವಳಿಯಲ್ಲಿ ಇಂದು ಮತ್ತು ನಾಳೆ ಸಾಮಾನ್ಯದಿಂದ 3 ಡಿಗ್ರಿ ಹೆಚ್ಚು ಉಷ್ಣಾಂಶ ಕಂಡುಬರಲಿದೆ. ಆದರೂ ಕೂಡಾ ಉಷ್ಣವಲಯದ ಮುನ್ನೆಚ್ಚರಿಕೆ ಏನೂ ಇಲ್ಲ. ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2- 3 ಡಿಗ್ರಿ ಕಡಿಮೆ ಆಗಿರಲಿದೆ, ದಕ್ಷಿಣ ಒಳನಾಡಲ್ಲಿ ಯಾವುದೇ ಬದಲಾವಣೆ ಇಲ್ಲ.