ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ 6 ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರ: 5 ಮಂದಿ ಸಾವು

Twitter
Facebook
LinkedIn
WhatsApp
lkjqw 5d36da9e690ee 1

ಬೆಂಗಳೂರು (ಏ.08): ರಾಜ್ಯದ ಆರು ಜಿಲ್ಲೆಗಳಲ್ಲಿ ಗುರುವಾರ ರಾತ್ರಿಯಿಂದೀಚೆಗೆ ಕೆಲಕಾಲ ಆಲಿಕಲ್ಲು ಸಹಿತ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಸಿಡಿಲು ಬಡಿದು ಮೂವರು ಸೇರಿ, ಮಳೆ ಸಂಬಂಧಿ ಅನಾಹುತಕ್ಕೆ ಐವರು ಬಲಿಯಾಗಿದ್ದಾರೆ. ಕಲಬುರಗಿ, ಕೊಪ್ಪಳ, ಗದಗ, ಧಾರವಾಡ, ಉತ್ತರ ಕನ್ನಡದಲ್ಲಿ ಶುಕ್ರವಾರ ಕೆಲಕಾಲ ಉತ್ತಮ ಮಳೆ ಸುರಿದಿದ್ದು, ಬೀದರ್‌ನಲ್ಲಿ ಸಾಧಾರಣ ಮಳೆಯಾಗಿದೆ. ಕೊಪ್ಪಳ, ಉತ್ತರ ಕನ್ನಡ, ಗದಗದಲ್ಲಿ ಭಾರೀ ಆಲಿಕಲ್ಲು ಸಹಿತ ಮಳೆಯಾಗಿದ್ದು, ಕೆಲವೆಡೆ ಬೆಳೆಗಳಿಗೂ ಹಾನಿಯಾಗಿದೆ.

ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕನೂರು ತಾಲೂಕು, ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸುಮಾರು ಅರ್ಧ ಗಂಟೆಗಳ ಕಾಲ ಸುರಿದ ಆಲಿಕಲ್ಲು ಮಳೆಯಿಂದಾಗಿ ರಸ್ತೆ, ಹೊಲಗಳೆಲ್ಲ ಸಂಪೂರ್ಣವಾಗಿ ಶ್ವೇತ ವರ್ಣಕ್ಕೆ ತಿರುಗಿತ್ತು. ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳದಲ್ಲಂತು ಮನೆ ಚಾವಣಿಗಳೆಲ್ಲ ಸಂಪೂರ್ಣವಾಗಿ ಆಲಿಕಲ್ಲುಗಳಿಂದ ಆವೃತವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲೂ ಆಲಿಕಲ್ಲು ಸಹಿತ ಒಂದು ಗಂಟೆ ಕಾಲ ಅಬ್ಬರದ ಮಳೆ ಸುರಿದಿದ್ದು, ಧಾರವಾಡ ಜಿಲ್ಲೆಯಲ್ಲೂ ಕೆಲಕಾಲ ಉತ್ತಮ ಮಳೆಯಾಗಿದೆ.

ಗದಗದಲ್ಲಿ ಸಿಡಿಲಿಗೆ ಇಬ್ಬರು ಬಲಿ: ಸಿಡಿಲಬ್ಬರಕ್ಕೆ ಗದಗ ತಾಲೂ​ಕಿನ ಲಿಂಗ​ದಾ​ಳ​ದಲ್ಲಿ ಕುರಿ ಮೇಯಿ​ಸಲು ತೆರ​ಳಿದ್ದ ಶರಣಪ್ಪ (16), ದೇವೇಂದ್ರಪ್ಪ (16) ಸ್ಥಳದಲ್ಲೇ ಮೃತಪಟ್ಟರೆ, ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಬಿಲ್ವಾಡ (ಬಿ) ಗ್ರಾಮದ ರೈತ ಭೋಗಪ್ಪ (60) ಕೃಷಿ ಕೆಲಸ ಮಾಡುತ್ತಿದ್ದಾಗ ಬಲಿಯಾಗಿದ್ದಾರೆ. ಇನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಯಂಕುಬಾಯಿ ಕುಲಕರ್ಣಿ (79), ಶಾರವ್ವಾ ಪತ್ತಾರ (58) ಅವರು ಮಳೆಯಿಂದಾಗಿ ನೆನೆದಿದ್ದ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದಾರೆ.

ಗಾಳಿಗೆ ಹಾರಿಹೋದ 10 ಚೆಕ್‌ಪೋಸ್ಟ್‌ಗಳು: ಅಸೆಂಬ್ಲಿ ಚುನಾವಣೆಗಾಗಿ ಜಿಲ್ಲಾದ್ಯಂತ 45ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿತ್ತು. ಈ ಪೈಕಿ ಅಫಜಲ್ಪುರ, ಕಲಬುರಗಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳ ಪೈಕಿ 10ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ಗಳು ಬಿರುಗಾಳಿಗೆ ಹಾರಿ ಹೋಗಿವೆ. ಬಳೂರಗಿ, ಅರ್ಜುಣಗಿ ಸೇರಿದಂತೆ ಗಡಿಯಲ್ಲಿ ಹಾಕಲಾಗಿದ್ದ ಚೆಕ್‌ಪೋಸ್ಟ್‌ಗಳು ಹಾರಿ ಹೋಗಿವೆ. ಬಟ್ಟೆಯ ಆಸರೆ ಇರುವ ತಾತ್ಕಾಲಿಕ ಚೆಕ್‌ಪೊಸ್ಟ್‌ ಇವಾಗಿದ್ದವು. ಬಿರುಗಾಳಿಗೆ ಅವೆಲ್ಲವೂ ಹರಿದು ಹಾರಿ ಹೋಗಿವೆ.

ಕಲಬುರಗಿ ನಗರ ಹಾಗೂ ಸುತ್ತಲಿನ 15 ಕಿಮೀ ವ್ಯಾಪ್ತಿಯಲ್ಲಿ ಶುಕ್ರವಾರ ಇಡೀ ದಿನ ಮೋಡ ಕವಿದ ವಾತಾವರಣವಿದೆ. ಕಲಬುರಗಿಯಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ತಲುಪಿತ್ತು. ಏಕಾಏಕಿ ಸುರಿದ ಶುಕ್ರವಾರದ ಧಾರಾಕಾರ ಮಳೆಯಿಂದಾಗಿ ತಂಪನೆಯ ವಾತಾವರಣ ಸೃಷ್ಟಿಯಾಗಿದೆ. ಬೇಸಿಗೆಯ ಪ್ರಖರ ತಾಪಮಾನ ತುಸು ಶಮನವಾದಂತಾಗಿದೆ. ರಭಸದ ಗಾಳಿ, ಗುಡುಗಿನ ಅಬ್ಬರ ಜೋರಾಗಿದ್ದರಿಂದ ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಹಲವೆಡೆ ಬೆಳಗಿನ 3 ಗಂಟೆ ಕರೆಂಟ್‌ ಇರಲೇ ಇಲ್ಲ. ಹೀಗಾಗಿ ಎಂದಿನ ಕೆಲಸಗಳಿಗೆ ಇದು ಭಾರಿ ಅಡ್ಡಿ ಮಾಡಿತ್ತು. ಮಳೆ, ಗಾಳಿಯ ರಭಸ ತಗ್ಗಿದ ನಂತರ ಕರೆಂಟ್‌ ಪುನಃ ಬಂತು. ಮರ ಗಿಡಗಳು ಧರೆಗೆ ಒರಗಿದ್ದಲ್ಲದೆ ಅನೇಕ ಕಡೆ ವಿದ್ಯುತ್‌ ತಂತಿಗಳ ಮೈಲೂ ಮರಲು ಬಿದ್ದ ಕಾರಣ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಕಾಡಿದೆ.

ಚೆಕ್‌ಪೋಸ್ಟ್‌ ಸಿಬ್ಬಂದಿ ಅಕಾಲಿಕ ಮಳೆ, ಬಿರುಗಾಳಿ, ಸಿಡಿಲಿಗೆ ತತ್ತರಿಸಿದ್ದಾರೆ. 2 ದಿನದಲ್ಲೇ ತುಂಬ ಆತಂಕ ಕಾಡಿದೆ. ಅನೇಕ ಕಡೆ ಸಿಬ್ಬಂದಿಗೆ ಗುರುವಾರ ಹಾಗೂ ಶುಕ್ರವಾರ ಮಳೆಯ ಕಾರಣದಿಂದಾಗಿ ಸರಿಯಾಗಿ ಊವೂ ದೊರಕಿಲ್ಲ. ಜಿಲ್ಲಾಡಳಿತ ಚೆಕ್‌ಪೋಸ್ಟ್‌ ಸಿಬ್ಬಂದಿಗಳ ಈ ತೊಂದರೆಯನ್ನು ಗಮನಿಸಿ ಪರಿಹರಿಸಬೇಕು ಎಂಬ ಕೂಗು ಎದ್ದಿದೆ. ಪೊಲೀಸ್‌, ಹಾಗೂ ಅದಿಕಾರಿಗಳು ಚೆಕ್‌ಪೋಸ್ಟ್‌ನಲ್ಲಿ ದಿನದ 24 ಗಂಟೆ ಕೆಲಸ ಮಾಡಲೇಬೇಕು. ಈ ಹಂತದಲ್ಲಿ ಸ್ಥಳಧಲ್ಲೇ ಊಟ ಪೂರೈಸುವ ಕೆಲಸವಾಗಬೇಕು ಎಂಬ ಕೂಗು ಹೆಚ್ಚಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist