ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

Twitter
Facebook
LinkedIn
WhatsApp
ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ನವದೆಹಲಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿಟಿ ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. 

ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ, ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ಪ್ರಹ್ಲಾದ್ ಜೋಶಿ ಸ್ವಾಗತ:
ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅತ್ಯಂತ ಗೌರವಯುತವಾಗಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ಬರಮಾಡಿಕೊಂಡು, ಸನ್ಮಾನಿಸಿ ಅಭಿನಂದಿಸಿದರು.

ವೀರೇಂದ್ರ ಹೆಗ್ಗಡೆ ಕುರಿತು ಮಾತನಾಡಿದ ಜೋಶಿ, ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದರು. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ