ಮಂಗಳವಾರ, ಮೇ 7, 2024
ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ ಚುನಾವಣೆ: 16 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್ ಕಣಕ್ಕೆ

Twitter
Facebook
LinkedIn
WhatsApp
ರಾಜ್ಯಸಭೆ ಚುನಾವಣೆ: 16 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್ ಕಣಕ್ಕೆ

ನವದೆಹಲಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ಹದಿನಾರು ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. 15 ರಾಜ್ಯಗಳಲ್ಲಿ ಒಟ್ಟು 57 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಮುಂಚಿತವಾಗಿ ಈ ಚುನಾವಣೆ ಅತ್ಯಂತ ನಿರ್ಣಾಯಕವಾಗಿದೆ.

 

ಬಿಜೆಪಿ ಬಿಡುಗಡೆ ಮಾಡಿರುವ ಪ್ರಮುಖ ಹೆಸರುಗಳಲ್ಲಿ, ಕರ್ನಾಟಕದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಹಾರಾಷ್ಟ್ರದಿಂದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಅವಧಿ ಮುಗಿಯುತ್ತಿದ್ದಂತೆ ಮರುಚುನಾವಣೆಗೆ ಮುಂದಾಗಿದ್ದಾರೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಅವಧಿಯೂ ಕೊನೆಗೊಳ್ಳಲಿದೆ. ಆದರೆ ಪಕ್ಷ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಅವರ ಹೆಸರು ನಮೂದಿಸಿಲ್ಲ. ಉತ್ತರ ಪ್ರದೇಶದಿಂದ ಲಕ್ಷ್ಮೀಕಾಂತ್ ವಾಜಪೇಯಿ, ರಾಧಾ ಮೋಹನ್ ಅಗರ್ವಾಲ್, ಸುರೇಂದ್ರ ನಗರ, ಬಾಬುರಾಮ್ ನಿಶಾದ್, ದರ್ಶನ ಸಿಂಗ್, ಸಂಗೀತಾ ಯಾದವ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಗರಿಷ್ಠ 11 ಸ್ಥಾನಗಳಿವೆ.

 

ಮಹಾರಾಷ್ಟ್ರದಲ್ಲಿ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ತನ್ನ ಪಟ್ಟಿಯಲ್ಲಿ ಪಿಯೂಷ್ ಗೋಯಲ್ ಜೊತೆಗೆ ಅನಿಲ್ ಬೋಂಡೆ ಅವರ ಹೆಸರು ನಮೂದಿಸಿದೆ. ತಮಿಳುನಾಡಿನಲ್ಲಿ ಆರು ಸ್ಥಾನಗಳಿದ್ದು, ಬಿಜೆಪಿ ಇದುವರೆಗೆ ಯಾವುದೇ ಅಭ್ಯರ್ಥಿಯನ್ನು ಹೆಸರಿಸಿಲ್ಲ.

ಬಿಹಾರದಿಂದ ಐದು, ಕರ್ನಾಟಕ, ರಾಜಸ್ಥಾನ ಮತ್ತು ಆಂಧ್ರಪ್ರದೇಶದಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ಒಡಿಶಾದಿಂದ ತಲಾ ಮೂರು, ಪಂಜಾಬ್, ಜಾರ್ಖಂಡ್, ಹರಿಯಾಣ, ಛತ್ತೀಸ್‌ಗಢ ಮತ್ತು ತೆಲಂಗಾಣದಿಂದ ತಲಾ ಎರಡು ಮತ್ತು ಉತ್ತರಾಖಂಡದಿಂದ ಒಂದು ಸ್ಥಾನಕ್ಕೂ ಚುನಾವಣೆ ನಡೆಯಲಿದೆ.

ಬಿಜೆಪಿಯ ಪಟ್ಟಿಯಲ್ಲಿ ರಾಜಸ್ಥಾನದಿಂದ ಘನಶ್ಯಾಮ್ ತಿವಾರಿ, ಉತ್ತರಾಖಂಡದಿಂದ ಕಲ್ಪನಾ ಸೈನಿ, ಬಿಹಾರದಿಂದ ಸತೀಶ್ ಚಂದ್ರ ದುಬೆ, ಶಂಭು ಶರಣ್ ಪಟೇಲ್, ಹರಿಯಾಣದಿಂದ ಕ್ರಿಶನ್ ಲಾಲ್ ಪನ್ವಾರ್, ಮಧ್ಯಪ್ರದೇಶದಿಂದ ಕವಿತಾ ಪಾಟಿದಾರ್, ಕರ್ನಾಟಕದಿಂದ ಜಗ್ಗೇಶ್ ಮತ್ತು ನಿರ್ಮಲಾ ಸೀತಾರಾಮನ್ ಇದ್ದಾರೆ.

ಚುನಾವಣೆ ನಡೆಯಲಿರುವ 57 ಸ್ಥಾನಗಳ ಪೈಕಿ ಬಿಜೆಪಿ 23 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್‌ 8 ಸ್ಥಾನಗಳನ್ನು ಹೊಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ