ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 40ಕ್ಕೂ ಹೆಚ್ಚು ಮುಖಂಡರು ವಶಕ್ಕೆ

Twitter
Facebook
LinkedIn
WhatsApp

ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಪಿಎಫ್​ಐ (PFI) ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.

ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 40ಕ್ಕೂ ಹೆಚ್ಚು ಮುಖಂಡರು ವಶಕ್ಕೆ

ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

ರಾಮನಗರದಲ್ಲಿ‌‌ 9 ಜನ, ಚನ್ನಪಟ್ಟಣದಲ್ಲಿ ‌6 ಜನ ಸೇರಿದಂತೆ 15 ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಡಿ ಕೋಲಾರದಲ್ಲಿ ನವಾಜ್ ಪಾಷಾ, ವಸೀಂ‌ ಪಾಷಾ, ಸಿದ್ದಿಕ್ ಪಾಷಾ, ಅಲ್ಲಾಭಕ್ಷ್ ಇಂತಿಯಾಜ್ ಪಾಷಾ, ಶಾಬಾಜ್ ಪಾಷಾ ಸೇರಿದಂತೆ 6 ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಉಡುಪಿ ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ, ಬೈಂದೂರಿನಲ್ಲೂ ರೇಡ್​ ಆಗಿದ್ದು ನಾಲ್ವರು PFI ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಕಲಬುರಗಿಯಲ್ಲಿ ಹುಸೇನ್ ಎಂಬ ಓರ್ವ PFI ಮುಖಂಡನನ್ನು ವಶಕ್ಕೆ ಪಡೆಯಲಾಗಿದ್ದು ಮತ್ತಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ PFI ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಸೇರಿ ಇಬ್ಬರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ರಾಯಚೂರಿನಲ್ಲೂ ಮೊಹ್ಮದ್ ಇಸ್ಮಾಯಿಲ್, ಆಸೀಂ ಸೇರಿ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರು PFI ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹೊಸಕೋಟೆಯಲ್ಲಿ 4 ಜನ, ದೊಡ್ಡಬಳ್ಳಾಪುರದಲ್ಲಿ 3 ಮತ್ತು ವಿಜಯಪುದಲ್ಲಿ ಇಬ್ಬರ ಮನೆಗಳ ಮೇಲೆ ದಾಳಿ ನಡೆದಿದ್ದು ಒಟ್ಟು 9 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ