ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯ ಪರಿವರ್ತನಾ ಸಂಸ್ಥೆ ಉಪಾಧ್ಯಕ್ಷರಾಗಿ Prof. Rajeev Gowda ನೇಮಕ

Twitter
Facebook
LinkedIn
WhatsApp
Prof. Rajeev Gowda

ಬೆಂಗಳೂರು: ರಾಜ್ಯಸಭೆಯ ಮಾಜಿ ಸದಸ್ಯರಾಗಿರುವ ಶ್ರೀ ರಾಜೀವ್ ಗೌಡ (Prof. Rajeev Gowda) ಅವರನ್ನು ರಾಜ್ಯ ಪರಿವರ್ತನಾ ಸಂಸ್ಥೆ ಉಪಾಧ್ಯಕ್ಷರಾಗಿ (ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ) ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ರಾಜ್ಯ ಯೋಜನಾ ಮಂಡಳಿ ಎಂಬ ಹೆಸರಿನಲ್ಲಿ ಅಸ್ತಿತ್ವದಲ್ಲಿದ್ದ ಸಂಸ್ಥೆಗೆ ಈಗ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮರು ನಾಮಕರಣ ಮಾಡಲಾಗಿದೆ. ಇದು ಕರ್ನಾಟಕದ ಪಾಲಿಗೆ ನೀತಿ ಆಯೋಗದ ಹೊಣೆಗಾರಿಕೆಗೆ ಸಮಾನವಾಗಿದೆ. ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಈ ಜವಬ್ದಾರಿ ವಹಿಸಲಾಗಿದೆ.

ಪ್ರೋ.ರಾಜೀವ್ ಗೌಡ ಅವರು 2014- 20ರ ವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಅಲ್ಲದೇ ಎಐಸಿಸಿಯ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದರು. 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿಯೂ ಆಗಿದ್ದರು. ಜೊತೆಗೆ ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಅವರು ಬೆಂಗಳೂರಿನ ಐಐಎಂನಲ್ಲಿ ಅರ್ಥಶಾಸ್ತ್ರ ಹಾಗೂ ಸಮಾಜ ವಿಜ್ಞಾನದ ಪ್ರೊಫೆಸರ್ ಆಗಿ ಕೆಲಸ ಮಾಡಿದ್ದಾರೆ. ಅಲ್ಲದೇ ಆರ್‌ಬಿಐನ ಕೇಂದ್ರ ಮಂಡಳಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಶಿಫಾರಸು ಮಾಡುವುದು, ನೂತನ ಪರಿಹಾರ ಮಾರ್ಗಗಳನ್ನು ಸರ್ಕಾರಕ್ಕೆ ಸೂಚಿಸುವುದು ಎಸ್‍ಐಟಿಕೆಯ ಕಾರ್ಯವಾಗಿದೆ. ಅಲ್ಲದೇ ವಿವಿಧ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಸರ್ಕಾರಕ್ಕೆ ಸಂಸ್ಥೆ ನೆರವಾಗಲಿದೆ. ಒಟ್ಟಾರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರಕ್ಕೆ ರಾಜ್ಯ ಪರಿವರ್ತನಾ ಸಂಸ್ಥೆ ಕಾರ್ಯನಿರ್ವಹಿಸಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೋ.ರಾಜೀವ್ ಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಲು ಇದೊಂದು ಉತ್ತಮ ಅವಕಾಶ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ