ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 6 ರಿಂದ 8 ನೇ ತರಗತಿವರೆಗೆ ಬೋಧನೆ ಮಾಡಲು ಒಟ್ಟು 15 ಸಾವಿರ ಪದವೀಧರ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸರ್ಕಾರಿ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿ ಬೋಧನೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ರೂಪಿಸಿರುವ ನಿಯಮಾವಳಿಗಳನ್ನು ಅಂತಿಮಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಶಿಕ್ಷಕರ ನೇಮಕಾತಿಯಲ್ಲಿ ಶೇ. 1 ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲಿದೆ.
ರಾಜ್ಯ ಸರ್ಕಾರವು ಜನವರಿ 21 ರಂದು ಈ ಸಂಬಂಧ ಕರಡು ನಿಯಮಾವಳಿ ಪ್ರಕಟಿಸಿದ್ದು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮಗೊಳಿಸಿದೆ. ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ಶೇ. 1 ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲಿದೆ.
ಶಿಕ್ಷಕ ಹುದ್ದೆಗೂ ಆಯಾ ವಿಷಯಗಳನ್ನು ಪದವಿಯಲ್ಲಿ ಅಧ್ಯಯನ ಮಾಡಿರುವವರನ್ನು ನೇಮಿಸುವುದು. ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಶೇ.50 ರಷ್ಟು ಅಂಕ. ಶಿಕ್ಷಕರ ಅರ್ಹತಾ ಪರೀಕ್ಷಾ ( TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20 ರಷ್ಟು ಅಂಕ ಹಾಗೂ ಬಿ.ಇಡಿ, ಡಿ.ಎಡ್. ಸೇರಿದಂತೆ ಅರ್ಹ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ನೇಮಕಾತಿಗೆ ಪರಿಗಣಿಸಲು ನಿರ್ಧರಿಸಲಾಗಿದೆ.
ಇನ್ನು ಎಲ್ಲಾ ಅಭ್ಯರ್ಥಿಗಳ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದ್ದು, ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ ಮತ್ತು ವಿಶೇಷಚೇತನ ಅಭ್ಯರ್ಥಿಗಳ ವಯೋಮಿತಿಯನ್ನು 47 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಯೋಮಿತಿಯನ್ನು 45 ವರ್ಷ ಹಾಗೂ ಸಾಮಾನ್ಯ ಅಭ್ಯರ್ಥಿಗಳ ವಯೋಮಿತಿಯನ್ನು 42 ವರ್ಷಗಳಿಗೆ ಏರಿಕೆ ಮಾಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist