ಮಂಗಳವಾರ, ಮೇ 21, 2024
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

Twitter
Facebook
LinkedIn
WhatsApp
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
 

ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ಮಂಗಳವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986ನೇ ಸಾಲಿನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರು ಇಂದು ಸಂಜೆ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

 
 

ಮಹಿಳೆಯರ ದರ್ಬಾರ್!
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017ನೇ ಇಸವಿಯಲ್ಲಿ ಕೆ. ರತ್ನಪ್ರಭ ಅವರೂ ಅಲಂಕರಿಸಿದ್ದರು.

ಕೆ ರತ್ನಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ.

ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ