ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ: ಇಂಧನ ಸಚಿವ ಸುನೀಲ್ ಕುಮಾರ್

Twitter
Facebook
LinkedIn
WhatsApp
ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪ ಇಲ್ಲ: ಇಂಧನ ಸಚಿವ ಸುನೀಲ್ ಕುಮಾರ್

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ.

ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌ ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ೧೩ ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ. ‌ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು‌‌ ಕಂಪನಿ ವ್ಯಾಪ್ತಿಯಲ್ಲಿ‌ ಪ್ರತಿ ಮೂರು ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ. ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ ( fuel cost adjustment charges ) ಪ್ರಸ್ತಾಪ ಹಿನ್ನೆಲೆಯಲ್ಲಿ‌ ಕೆಇಆರ್ ಸಿ ಈ ದರ ಪರಿಷ್ಕರಿಸಿದೆ.

ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್ ಸಿ ವಿವೇಚನಾಧಿಕಾರವಾಗಿದ್ದು,‌‌ ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು. ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ