ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಶಿ ರಾಶಿ ಚಿನ್ನದ ಬಿಸ್ಕೆಟ್‌ ಕಂಡು ದಂಗಾದ ಅಧಿಕಾರಿಗಳು, 91.5 ಕೆಜಿ ಚಿನ್ನ, 340 ಕೆಜಿ ಬೆಳ್ಳಿ ವಶಪಡಿಸಿಕೊಂಡ ‘ಇಡಿ’!

Twitter
Facebook
LinkedIn
WhatsApp
ರಾಶಿ ರಾಶಿ ಚಿನ್ನದ ಬಿಸ್ಕೆಟ್‌ ಕಂಡು ದಂಗಾದ ಅಧಿಕಾರಿಗಳು, 91.5 ಕೆಜಿ ಚಿನ್ನ, 340 ಕೆಜಿ ಬೆಳ್ಳಿ ವಶಪಡಿಸಿಕೊಂಡ ‘ಇಡಿ’!

ನವದೆಹಲಿ, ಸೆ 14 : ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ₹ 47 ಕೋಟಿಗೂ ಹೆಚ್ಚು ಮೌಲ್ಯದ 431 ಕೆಜಿ ಚಿನ್ನ ಮತ್ತು ಬೆಳ್ಳಿಯನ್ನು ಜಾರಿ ನಿರ್ದೇಶನಾಲಯ ಇಂದು ವಶಪಡಿಸಿಕೊಂಡಿದೆ.

ಪರೇಖ್ ಅಲ್ಯುಮಿನೆಕ್ಸ್ ಲಿಮಿಟೆಡ್ ಎಂಬ ಕಂಪನಿಯ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಾ ಬುಲಿಯನ್ ಮತ್ತು ಕ್ಲಾಸಿಕ್ ಮಾರ್ಬಲ್ಸ್ ನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ದಾಳಿಯ ಸಂದರ್ಭದಲ್ಲಿ ರಕ್ಷಾ ಬುಲಿಯನ್ ಕಂಪನಿಯ ಆವರಣದಲ್ಲಿ ಕೆಲವು ರಹಸ್ಯ ಖಾಸಗಿ ಲಾಕರ್‌ಗಳ ಕೀಗಳು ಪತ್ತೆಯಾಗಿದೆ. ಅಲ್ಲಿರುವ ಖಾಸಗಿ ಲಾಕರ್‌ಗಳನ್ನು ಪರಿಶೀಲಿಸಿದಾಗ, ಸರಿಯಾದ ಮಾನದಂಡಗಳನ್ನು ಅನುಸರಿಸದೆ ಲಾಕರ್ ಕಾರ್ಯಾಚರಣೆ ನಡೆಸುತ್ತಿರುವುದು ಕಂಡುಬಂದಿದೆ. “ಯಾವುದೇ ಕೆವೈಸಿ ಇಲ್ಲದಿರುವುದು ಹಾಗೂ ಆವರಣದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾ ಅಳವಡಿಸದಿರುವುದು ಹಾಗೂ ಇನ್ ಮತ್ತು ಔಟ್ ರಿಜಿಸ್ಟರ್ ಇಲ್ಲದಿರುವುದು ಕಂಡುಬಂದಿದೆ ,” ಎಂದು ಇ.ಡಿ ಹೇಳಿದೆ.

ಆವರಣದಲ್ಲಿ 761 ಲಾಕರ್‌ಗಳಿದ್ದು, ಇದರಲ್ಲಿ ಮೂರು ರಕ್ಷಾ ಬುಲಿಯನ್‌ಗೆ ಸೇರಿದ್ದವು “ಲಾಕರ್‌ಗಳನ್ನು ತೆರೆದಾಗ ಎರಡು ಲಾಕರ್‌ಗಳಲ್ಲಿ 91.5 ಕೆಜಿ ಚಿನ್ನ (ಬಾರ್‌ಗಳು) ಮತ್ತು 152 ಕೆಜಿ ಬೆಳ್ಳಿ ಪತ್ತೆಯಾಗಿದ್ದು ಇದನ್ನು ವಶಪಡಿಸಿಕೊಳ್ಳಲಾಗಿದೆ.”

ರಕ್ಷಾ ಬುಲಿಯನ್ ಸ್ಥಳದಿಂದ ಹೆಚ್ಚುವರಿ 188 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ್ ವಶಪಡಿಸಿಕೊಂಡ ಚಿನ್ನ ಮತ್ತು ಬೆಳ್ಳಿಯ ಒಟ್ಟು ಮೌಲ್ಯ ₹ 47.76 ಕೋಟಿ ರೂಪಾಯಿ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಪರೇಖ್ ಅಲ್ಯುಮಿನೆಕ್ಸ್ ಲಿಮಿಟೆಡ್ ವಿರುದ್ಧದ ಮನಿ ಲಾಂಡರಿಂಗ್ ಪ್ರಕರಣವು ಮಾರ್ಚ್ 2018ರದ್ದಾಗಿದೆ. ಈ ಅವಧಿಯಲ್ಲಿ ಕಂಪನಿಯು ಬ್ಯಾಂಕ್‌ಗಳಿಗೆ ವಂಚನೆ ಎಸಗಿದ್ದು, 2,296.58 ಕೋಟಿ ರೂ. ಸಾಲವನ್ನು ಪಡೆದುಕೊಂಡಿದೆ ಎಂದು ಆರೋಪಿಸಲಾಗಿದೆ.

ಈ ಹಣವನ್ನು, ನಂತರ ವಿವಿಧ ಕಂಪನಿಗಳಿಗೆ ವರ್ಗಾವಣೆ ಮಾಡುವ ಮೂಲಕ ಸೋರಿಕೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ