ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಭಕ್ತರ ಕಾಲಿನ ಧೂಳಿಗೆ ಸಮವಾಗಲೂ ಬಯಸುತ್ತೇನೆ ಎಂದ ಸಿಟಿ ರವಿ.

Twitter
Facebook
LinkedIn
WhatsApp
ರಾಷ್ಟ್ರಭಕ್ತರ ಕಾಲಿನ ಧೂಳಿಗೆ ಸಮವಾಗಲೂ ಬಯಸುತ್ತೇನೆ ಎಂದ ಸಿಟಿ ರವಿ.

ಬೆಂಗಳೂರು: ಸಿ ಟಿ ರವಿ ಅವರು ನೆಹರು ಹಾಗೂ ಇಂದಿರಾ ಗಾಂಧಿಯವರ ಕಾಲಿನ ಧೂಳಿಗೂ ಸಮವಿಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, “ನೀವು ಹೇಳಿದ್ದು ನೂರಕ್ಕೆ ನೂರು ಸತ್ಯ. ನಾನು ನೆಹರು ಹಾಗೂ ಇಂದಿರಾ ಗಾಂಧಿಯವರ ಪಾದದ ಧೂಳಿಗೆ ಖಂಡಿತ ಸಮಾನ ಅಲ್ಲ. ಈ ಮಹಾ ಭಾಗ್ಯ ಗುಲಾಮರಿಗೆ ಮಾತ್ರ ಮೀಸಲು” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮಾನ್ಯ ದಿನೇಶ್‌ ಗುಂಡೂರಾವ್‌ ಅವರೇ, “ನೀವು ಹೇಳಿದ್ದು ನೂರಕ್ಕೆ ನೂರು ಸತ್ಯ. ನಾನು ನೆಹರು ಹಾಗೂ ಇಂದಿರಾ ಗಾಂಧಿಯವರ ಪಾದದ ಧೂಳಿಗೆ ಖಂಡಿತ ಸಮಾನ ಅಲ್ಲ. ಈ ಮಹಾ ಭಾಗ್ಯ ಗುಲಾಮರಿಗೆ ಮಾತ್ರ ಮೀಸಲು. ರಾಷ್ಟ್ರಭಕ್ತರ ಹಾಗೂ ಮಹಾನ್ ಸಾಧಕರ ಪಾದದ ಧೂಳಿಗೆ ಸಮಾನವಾಗ ಬಯಸುತ್ತೇನೆಯೇ ಹೊರತು ದೇಶವನ್ನು ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಂಡವರ ಪಾದದ ಧೂಳಿಗಲ್ಲ” ಎಂದು ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್‌‌‌ನ ಹೆಸರು ಬದಲಾಯಿಸಬೇಕು ಎಂದು ಕೆಲ ದಿನಗಳ ಹಿಂದೆ ಸಿ ಟಿ ರವಿ ಅವರು ಆಗ್ರಹಿಸಿದ್ದರು. ಆದರೆ, ಈ ನಡುವೆ ಹೇಳಿಕೆ ನೀಡಿದ್ದ ರವಿ ಅವರು, “ಕಾಂಗ್ರೆಸ್ಸಿಗರು ಬೇಕಾದಲ್ಲಿ ನೆಹರು, ಇಂದಿರಾ ಗಾಂಧಿ ಹೆಸರಲ್ಲಿ ಹುಕ್ಕಾಬಾರ್‌ಗಳನ್ನು ತೆರೆಯಲಿ” ಎಂದಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ದಿನೇಶ್‌ ಗುಂಡೂರಾವ್‌‌, “ಹುಚ್ಚುನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಿ. ಟಿ ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ. ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ರವಿಗೆ ಯಾವುದಾದರೂ ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ, ಮಲ್ಲೇಶ್ವರದ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ. ಹೇಗಿದ್ದರೂ ಬಿಜೆಪಿ ಹುಚ್ಚರ ಸಂತೆಯಲ್ಲವೇ?” ಎಂದು ಪ್ರಶ್ನಿಸಿದ್ದರು.
ನೆಹರು ಹಾಗೂ ಇಂದಿರಾ ಗಾಂಧಿಯವರ ಕಾಲಿನ ಧೂಳಿಗೂ ಸಮವಿಲ್ಲದ ಸಿ ಟಿ ರವಿ, ಅವರ ಬಗ್ಗೆ ಕೀಳಾಗಿ ಮಾತನಾಡುವುದು ಅವರ ಹೀನ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ಕಚೇರಿಯನ್ನು ಹುಕ್ಕಾ ಬಾರ್ ಮಾಡಲು ಸಲಹೆ ಕೊಟ್ಟಿರುವ ರವಿ, ಕೇಶವ ಕೃಪಾ ಕಚೇರಿಯನ್ನು ‘ಡ್ಯಾನ್ಸ್ ಬಾರ್‌’ ಮಾಡಿ ಆಧುನಿಕ ‘ಬೃಹನ್ನಳೆ’ಯಂತೆ ನಾಟ್ಯ ಮಾಡುತ್ತಾರೆಯೇ? ಎಂದು ಕೇಳಿದ್ದರು.
ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ ಟಿ ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಇವರಿಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು